ಆಳಂದ: ತಾಲೂಕಿನ ಪ್ರಬಲ ಮುಖಂಡರಾದ ವಿಠ್ಠಲರಾವ ಪಾಟೀಲ, ಶಿವಪ್ಪ ವಾರಿಕ ಖಜೂರಿ ಗುರುವಾರ ಹಲವು ಪ್ರಮುಖ ನಾಯಕರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ವಿಠ್ಠಲರಾವ ಪಾಟೀಲ ಅವರು ಆಳಂದ ಪುರಸಭೆಯ ಮಾಜಿ ಅಧ್ಯಕ್ಷರಾಗಿದ್ದಾರೆ ಅಲ್ಲದೇ ಮಹಾರಾಷ್ಟ್ರದ ಮಾಜಿ ಸಚಿವ ಬಸವರಾಜ ಪಾಟೀಲ ಮುರುಮ ಅವರ ಸಂಬಂಧಿಯಾಗಿದ್ದಾರೆ. ಆಳಂದ ಪಟ್ಟಣವಲ್ಲದೇ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳನ್ನು ಹೊಂದಿದ್ದಾರೆ.
ಶಿವಪ್ಪ ವಾರಿಕ ಖಜೂರಿ ಅವರು ತಾ.ಪಂ ಮಾಜಿ ಸದಸ್ಯರಾಗಿದ್ದು ಹಲವು ವರ್ಷಗಳಿಂದ ಮಾಜಿ ಶಾಸಕ ಬಿ ಆರ್ ಪಾಟೀಲ ಜೊತೆ ಗುರುತಿಸಿಕೊಂಡಿದ್ದರು. ಶಾಸಕ ಸುಭಾಷ್ ಆರ್ ಗುತ್ತೇದಾರರ ಜನಪರ ಕಾಳಜಿ ಮೆಚ್ಚಿ ಬಿಜೆಪಿ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.
ಪಕ್ಷ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಆಳಂದ ತಾಲೂಕಿನಲ್ಲಿ ಸುಭಾಷ್ ಆರ್ ಗುತ್ತೇದಾರ ಅವರು ಮಹತ್ತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಅಲ್ಲದೇ ಹಿಂದಿಗಿಂತಲೂ ಹೆಚ್ಚಿನ ಪ್ರಮಾಣದ ಅನುದಾನ ತಂದು ತಾಲೂಕಿನ ಮೂಲೆ ಮೂಲೆಯಲ್ಲೂ ಕಾಮಗಾರಿ ಪ್ರಾರಂಭಿಸಿದ್ದಾರೆ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದೇವೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಸಂಚರಿಸಿ ಬಿಜೆಪಿ ಪಕ್ಷದ ಸಂಘಟನೆ ಮಾಡಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರ ಕೈ ಬಲಪಡಿಸಿ ಅವರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಹೊತ್ತಿದ್ದೇವೆ ಎಂದು ಹೇಳಿದರು.
ಶಾಸಕ ಸುಭಾಷ್ ಆರ್ ಗುತ್ತೇದಾರ ಅವರನ್ನು ಪಕ್ಷದ ಶಾಲು, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ, ಕೆಎಂಎಫ್ ನಿರ್ದೇಶಕ ಸಂತೋಷ ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…