ಶಹಾಬಾದ:ನಗರದ ಪ್ರದೇಶದಲ್ಲಿ ವಾಸವಾಗಿರುವ ಬಡವರು ಸೇರಿದಂತೆ ಎಲ್ಲರಿಗೂ ನಮ್ಮ ಕ್ಲಿನಿಕ್ ಜನಸ್ನೇಹಿ, ಜನೋಪಯೋಗಿಯಾಗಿ ಆರೋಗ್ಯ ಸೇವೆ ಒದಗಿಸಲು ಮುಂದಾಗಬೇಕು ಎಂದು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.
ಅವರು ಮಂಗಳವಾರ ನಗರದ ಹಳೆಯ ಶಹಾಬಾದನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ನಮ್ಮ ಕ್ಲಿನಿಕ್‍ನಲ್ಲಿ ಸಾರ್ವಜನಿಕರಿಗೆ ಸರಳವಾಗಿ ಆರೋಗ್ಯ ಸೇವೆ ದೊರೆಯಬೇಕು.ಇದು ಕಾಟಾಚಾರಕ್ಕಾಗದೇ ಬಡವರಿಗೆ, ಕೂಲಿ ಕಾರ್ಮಿಕರಿಗೆ ಉತ್ತಮ ಆರೋಗು ಸೇವೆ ದೊರೆಯಬೇಕು ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ರಾಜಶೇಖರ ಮಾಲಿ, ಇದು ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುವ ಹೊಸ ಯೋಜನೆಯಾಗಿದೆ. ನಗರದ ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು ಮತ್ತು ಸಮಾಜದಲ್ಲಿರುವ ಇತರ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎನ್ನುವ ದೃಷ್ಟಿಯಿಂದ ಸರ್ಕಾರ ನಮ್ಮ ಕ್ಲಿನಿಕ್‍ಗಳು ಎಂದು ಹೊಸ ಯೋಜನೆ ಪ್ರಾರಂಭಿಸಿ 12 ಉಚಿತ ಆರೋಗ್ಯ ಸೇವೆಯನ್ನು ಸಾರ್ವಜನಿಕರಿಗೆ ಸಿಗುವಂತೆ ಮಾಡುತ್ತಿದೆ ಎಂದು ಹೇಳಿದರು.
ತಾಲೂಕು ಟಿ. ಎಚ. ಓ. ವೈದ್ಯಾಧಿಕಾರಿಗಳಾದ ಡಾ. ಅಮರದೀಪ ಮಾತನಾಡಿ ನಮ್ಮ ಕ್ಲಿನಿಕ್‍ಳಲ್ಲಿ 12 ರೀತಿಯ ವೈದ್ಯಕೀಯ ಸೇವೆಗಳು ಲಭ್ಯವಿದೆ. ಪ್ರತಿ ನಮ್ಮ ಕ್ಲಿನಿಕಗಳಲ್ಲಿ ವೈದ್ಯಕೀಯ ಅಧಿಕಾರಿ, ನರ್ಸ್, ಲ್ಯಾಬ್ ಟೆಕ್ನೀಷಿಯನ್ ಮತ್ತು ಗ್ರೂಪ್ ಡಿ ನೌಕರ ಇರುತ್ತಾರೆ. ಇಲ್ಲಿ ಲಭ್ಯವಿರುವ 12 ಸೇವೆಗಳಲ್ಲಿ ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ, ನವಜಾತ ಶಿಶುಗಳ ಆರೈಕೆ, ಶಿಶುಗಳಿಗೆ ಚಿಕಿತ್ಸೆ, ಮಕ್ಕಳು ಮತ್ತು ಹದಿಹರೆಯದವರ ಆರೋಗ್ಯ ಕಾಳಜಿ, ಲಸಿಕೆ ಸೇವೆ, ಕುಟುಂಬ ನಿಯಂತ್ರಣ, ಸೋಂಕು ರೋಗಗಳ ನಿರ್ವಹಣೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ನಿರ್ವಹಣೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ, ಮರುಕಳಿಸುವ ಕಾಯಿಲೆಗಳು ಸೇರಿವೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಸಮಸ್ಯೆಗಳಿಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳನ್ನೂ ಉಚಿತವಾಗಿ ಒದಗಿಸಲಾಗುವುದು ಎಂದರು.
ನಮ್ಮ ಕ್ಲಿನಿಕ್‍ನ ಡಾ. ಸೈಯದ ಶೋಯಬ್ ಮಾತನಾಡಿ, ಸೋಮವಾರ ದಿಂದ ಶನಿವಾರದವರೆಗೆ ಬೆಳಿಗ್ಗೆ 9 ರಿಂದ ಸಂಜೆ 4.30ರ ವರೆಗೆ ನಮ್ಮ ಕ್ಲಿನಿಕ್‍ಗಳು ಕಾರ್ಯನಿರ್ವಹಿಸುತ್ತವೆ.ಜನ ವಸತಿಗಳಿಗೆ ಹತ್ತಿರದಲ್ಲಿ ಕ್ಲಿನಿಕ್‍ಗಳು ಆರಂಭಿಸುವುದರಿಂದ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಸಾಧ್ಯವಾಗುತ್ತದೆ. ಅμÉ್ಟೀ ಅಲ್ಲ ಸರ್ಕಾರಿ ಆಸ್ಪತ್ರೆಗಳ ಮೇಲಿರುವ ಒತ್ತಡವೂ ಕಡಿಮೆಯಾಗುತ್ತದೆ. ಎಂದರು.
ಮುಖ್ಯಅಥಿತಿಗಳಾಗಿ ಆರಸಿಹೆಚಓ ಪ್ರಭುಲಿಂಗ ಮಾನಕರ, ಸಿಪಿಎಂ ಶ್ರೀಕಾಂತಸ್ವಾಮಿ, ನಗರಸಭೆಯ ಪೌರಾಯುಕ್ತ ಬಸವರಾಜ ಹೆಬ್ಬಾಳ,ಸ್ಥಾಯಿಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ,ನಗರ ಸಭೆಯ ಸದಸ್ಯರಾದ ಇನಾಯತ ಖಾನ ಜಮಾದಾರ, ತಿಪ್ಪಣ್ಣಾ ನಾಟೀಕರ, ಚಂದ್ರಕಾಂತ ನಾಟೀಕರ, ಆಶ್ರಯ ಕಮೀಟಿಯ ಸದಸ್ಯರಾದ ಶಿವುಗೌಡ ಪಾಟೀ¯,ಗುರುರಾಜ ಪಾಟೀಲ್, ಶಿವರಾಜ ಪಾರಾ, ಅಮ್ಜದ ಜಮಾದಾರ, ಅಲ್ಲಾಭಕ್ಷ ಗುತ್ತೇದಾರ ಮತ್ತು ಆರೋಗ್ಯ ಇಲಾಖೆಯ ಡಾ.ಶಂಕರ, ಯುಸುಫ್‍ನಾಕೇದಾರ , ಜ್ಯೋತಿ ಭಾಗ್ಯಕರ್, ಶರಣಬಸಪ್ಪಾ ನಾಲವರ ಉಪಸ್ಥಿತರಿದರು. ಶ್ರೀಶೈಲಪ್ಪಾ ಬೆಳಮಗಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಶರಣಗೌಡ ಪಾಟೀಲ ನಿರೂಪಿಸಿ, ಸ್ವಾಗತಿಸಿದರು. ಗೀತಾ ಖಂಡೇಲಕರ ವಂದಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…