ಕಲಬುರಗಿ: ನಗರ ಸೇರಿದಂತೆ ಜಿಲ್ಲೆಯಲ್ಲಿ ಮತದಾರರಪಟ್ಟಿಯಲ್ಲಿ ಅಲ್ಪಸಂಖ್ಯಾತರ ಹೆಸರು ನಾಪತ್ತೆಯಾಗಿದ್ದು, ಇಂತಹ ಹೆಸರುಗಳ ಪಟ್ಟಿಯಲ್ಲಿ ಮರು ಸೇರಡೆ ಮಾಡಬೇಕು ಮತ್ತು ಹೊಸಹೆಸರುಗಳನ್ನು ಸೇರಿಸಲು ಶ್ರಮಿಸಬೇಕೆಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಲಾಲ್ ಅಹ್ಮದ್ ಬಾಂಬೆಸೇಠ ಅವರು ಸಲಹೆ ನೀಡಿದರು.
ರಾಯಚೂರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತ, ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕ ಮುಂದುಡುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವಂತೆ ಕರೆ ನೀಡಿದರು. ವಿಧಾನ ಸಭಾ ಚುನಾವಣೆ ಬರಲಿದ್ದು,ಪಕ್ಷದ ಅಲ್ಪಸಂಖ್ಯಾತ ವಿಭಾಗದ ಮುಖಂಡರು ಕಾರ್ಯಕರ್ತರು ಅಲ್ಪಸಂಖ್ಯಾತರ ಮತಗಳು ಹರಿದು ಹಂಚಿ ಹೋಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಮೌಲಾನಾ ಫರೀದ್ ಖಾನ್, ಮಾಜಿ ಉಪಾಧ್ಯಕ್ಷ ರಸೂಲ್‍ಸಾಬ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸಾಜೀದ್ ಸಮೀರ್, ಜಿ.ಪಂ. ಮಾಜಿ ಸದಸ್ಯ ಬರುದ್ದೀನ್ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ನಜೀರ್ ಪಂಜಾಬಿ, ಮಹ್ಮದ್ ಶಾಲಂ, ಮೊಹ್ಮದ್ ಫೀರೋಜ ಹಮರಾಜ್ ಟೈಲರ್, ಸೈಯದ್ ಇಸ್ಮಾಯಿಲ್, ಜಹೀರ್ ಅಹ್ಮದ್, ದಸ್ತಗೀರ್, ಮಹಬೂಬು ಸಾಬ ಲಿಂಗಸೂಗೂರ ಸೇರಿದಂತೆ ಅನೇಕರು ಉಪಸ್ಥರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…