ಬಿಸಿ ಬಿಸಿ ಸುದ್ದಿ

ವಸತಿ ನಿಲಯ ಸ್ಥಳಾಂತರಕ್ಕೆ ವಿರೋಧಿಸಿ ಹೈ.ಕ.ವಿ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ

ರಾಯಚೂರು: ಇಂದು ಮಾನ್ವಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಸ್ಥಳಾಂತರ ವಿರೋಧಿಸಿ ತಾಲ್ಲೂಕು ಪಂಚಾಯತ್ ಮುಂದೆ ಹೈದರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಅವಧಿ ಧರಣಿ ನಡೆಸಿದರು.

ಮಾನ್ವಿ ತಾಲ್ಲೂಕಿನ ನೂತನ ವಸತಿ ನಿಲಯ ನಗರದಿಂದ ಸುಮಾರು 6 ರಿಂದ 8  ಕಿಲೋಮೀಟರ್ ದೂರವಿದ್ದು, ಸುಮಾರು 200 ವಿದ್ಯಾರ್ಥಿಗಳಿಗೆ ಏಳು ಕೋಣೆಗಳು ಮತ್ತು ಕೇವಲ ಮೂರು ಶೌಚಾಲಯಗಳು ಮಾತ್ರ ಇವೆ ಇಂತಹ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳನ್ನು ದನಕರುಗಳಂತೆ ಇಡಲಾಗುತ್ತಿದೆ ಎಂದು ನ್ಯಾಯವಾದಿ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಮಲ್ಲೇಶ್ ಮಾಚನೂರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ನೂತನ ವಸತಿ ನಿಲಯ ನಗರದ ಹೊರವಲಯದ ಕಾಡು ಪ್ರದೇಶದಲ್ಲಿ ಇದ್ದು ವಿದ್ಯಾರ್ಥಿಗಳಿಗೆ ಸಂಕಷ್ಟಕೆ ಸಿಲುಕಿದ್ದಾರೆ ಎಂದು ತಿಳಸಿದರು. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಅಧಿಕಾರಿ ಸ್ಪಂದಿಸದೆ ಇರುವುದರಿಂದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟಾಡುತಿದ್ದಾರೆಂದು ಪ್ರತಿಭಟನೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ಪರಶುರಾಮ ಆರೋಲಿ ವಿದ್ಯಾರ್ಥಿ ಏಲಿಯಾಸ್,  ರಮೇಶ್ , ಸಿದ್ದಾರ್ಥ್ ಸೇರಿದಂತೆ ಮುಂತಾದ ವಿದ್ಯಾರ್ಥಿಗಳು ಧರಣಿಯಲ್ಲಿ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago