ಚಿತ್ತಾಪುರ: ಭಾರತೀಯ ದಲಿತ ಪ್ಯಾಂಥರ್ ಚಿತ್ತಾಪೂರ ತಾಲೂಕ ಸಮಿತಿ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ರದ್ದು ಆದೇಶ ಹಿಂಪಡೆಯಲು ಹಾಗೂ ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಮಾಡಲು ಒತ್ತಾಯಿಸಿ ಇಂದು ತಹಶೀಲ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಅಧ್ಯಕ್ಷ ಗಂಗಾಧರ ಮಾಡಬೂಳ ಮಾತನಾಡಿ, ಯಡಿಯೂರಪ್ಪ ಸರಕಾರ ಟಿಪ್ಪು ಜಯಂತಿ ಆಚರಣೆ ರದ್ದು ಪಡಿಸಿದ್ದು ಸಮಿತಿ ಖಂಡಿಸುತ್ತದೆ ಎಂದು ತಿಳಿಸಿ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಪ್ರವಾಹ ಪ್ರದೇಶಗಳಲ್ಲಿನ ಜನ ಪ್ರವಾಹದಿಂದ ತತ್ತರಿಸುತ್ತಿದ್ದು, ಸಂಪುಟ ರಚನೆ ಇಲ್ಲದೆ ಜನರು ಸಮಸ್ಯೆಗೆ ಕಿವಿ ಇಲ್ಲದಂತಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಯಡಿಯೂರಪ್ಪ ಅವರು ಸಂಪುಟ ರಚನೆ ಮಾಡಬೇಕೆಂದು ಒತ್ತಾಯಿಸಿ ತಾಲ್ಲೂಕು ದಂಡಾಧಿಕಾರಿಗಳ ಮೂಲಕ ಸರಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಭರತ್ ಬುಳ್ಳ, ಕಾಶಿನಾಥ್ ದಿವಂಟಗಿ, ಶರಣು ಉಡಗಿ, ಕಾಶಿನಾಥ್ ಶೆಳ್ಳಗಿ, ದಿನೇಶ್ ಮೊಘಾ, ನವೀನ್ ಕುಮಸಿ, ಸೋಮು ಸಣ್ಣೂರ್, ಕಾಶಿ ವಚ್ಚಾ, ಕರಣ ಕೋರವಾರ, ಸುಧಿರ್ ದಂಡೋತಿ, ರಾಹುಲ್ ಅಂಗನಳ್ಳಿ, ರಾಹುಲ್ ಹದನೂರ್, ಉಮೇಶ್ ಸಜ್ಜನ್, ಶಿವಯೋಗಿ ಕೊಳ್ಳುರ್ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…