ಬಿಸಿ ಬಿಸಿ ಸುದ್ದಿ

ಡಿ.28 ರಿಂದ ಮೂರು ದಿನಗಳ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನ ಗಂಗಾ ಆವರಣದಲ್ಲಿ ಪ್ರಸಕ್ತ 2022-23ನೇ ಸಾಲಿನ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ-2022 ಕಾರ್ಯಕ್ರಮ ಇದೇ ಡಿಸೆಂಬರ್ 28 ರಿಂದ 30ರ ವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ವಿ.ವಿ. ಕುಲಪತಿ ಪೆÇ್ರ.ದಯಾನಂದ ಅಗಸರ್ ತಿಳಿಸಿದರು.

ಸೋಮವಾರ ವಿ.ವಿಯ ರಾಧಾಕೃಷ್ಣ ಸಭಾಂಗಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ನಂತರ ಆಯೋಜಿಸುತ್ತಿರುವ ಯವಜನೋತ್ಸವ ಇದಾಗಿದೆ. ಯುವಜನೋತ್ಸವಕ್ಕೆ ಇದೂವರೆಗೂ 15 ಕಾಲೇಜುಗಳು ನೋಂದಣಿ ಮಾಡಿಕೊಂಡಿದ್ದು, ಪ್ರತಿ ಮಹಾವಿದ್ಯಾಲಯದ 50 ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ ಸ್ಥಳದಲ್ಲಿಯೂ ಕಾಲೇಜುಗಳ ನೋಂದಣಿಗೆ ಅವಕಾಶ ನೀಡಲಾಗಿದ್ದರಿಂದ ಇನ್ನೂ ಹೆಚ್ಚಿನ ಕಾಲೇಜುಗಳ ಭಾಗವಹಿಸುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಯುವಜನೋತ್ಸವ ಯಶಸ್ಸಿಗೆ 20 ಸಮಿತಿಗಳನ್ನು ರಚಿಸಿ, ಸಮಿತಿ ಸದಸ್ಯರಿಗೆ ಜವಾಬ್ದಾರಿ ನೀಡಲಾಗಿದೆ. ಸಾಂಸ್ಕøತಿಕ ಯುವಜನೋತ್ಸವಕ್ಕೆ ವಿ.ವಿ. ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದರು.

ವಿಶ್ವವಿದ್ಯಾಲಯದಲ್ಲಿ ಸಾಂಸ್ಕøತಿಕ ವಾತವರಣ ನಿರ್ಮಿಸಲು ಡಿ.28 ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಸೌಧದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದ ವರೆಗೆ ಜಾನಪದ ಕಲಾ ತಂಡಗಳ ನೃತ್ಯ ಮತ್ತು ವಾದ್ಯ ಮೇಳದೊಂದಿಗೆ ಯುವಜನೋತ್ಸವದ ಭವ್ಯ ಮೆರವಣಿಗೆ ಆರಂಭವಾಗಲಿದೆ. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಚಲನಚಿತ್ರ ಹಿನ್ನೆಲೆ ಗಾಯಕಿ ಬಿ. ಆರ್, ಛಾಯಾ ಅವರು ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಂಸೃತಿಕ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.

ಯುವ ಉತ್ಸಾಹಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಲ್ಲಿ ಕಲಾ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರೋತ್ಸಾಹಿಸುವುದರ ಜೊತೆಗೆ ಸಾಂಸ್ಕøತಿಕ ಚಟುವಟಿಕೆಗಳಾದ ವೃತ್ತಿ ಕಲೆ, ದೃಶ್ಯಕಲಾ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ವೈವಿಧ್ಯಮಯವಾದ 27 ಬಗೆಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿ.ವಿ. ವ್ಯಾಪ್ತಿಯ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿ ಕಲಾ ಪ್ರತಿಭೆ ಪ್ರದರ್ಶನಕ್ಕೆ ಯುವಜನೋತ್ಸವ ಉತ್ತಮ ವೇದಿಕೆಯಾಗಲಿದೆ ಎಂದು ವಿವರಿಸಿದರು.

ಮೂರು ದಿನಗಳ ಕಾಲ ಯುವಜನೋತ್ಸವದಲ್ಲಿ ವಿ.ವಿ.ಯ ವಿವಿಧ ಸಭಾಂಗಣದಲ್ಲಿ ವೃಂದ ಗಾಯನ(ಭಾರತೀಯ), ಏಕವ್ಯಕ್ತಿ ಸ್ವರ ಗಾಯನ(ಪಾಶ್ಚಿಮಾತ್ಯ), ವೃಂದ ಗಾಯನ(ಪಾಶ್ಚಿಮಾತ್ಯ), ರಸಪ್ರಶ್ನೆ-ಬರಹ, ಅಂಟು ಪತ್ರಗಳ ತಯಾರಿಕೆ(ಪೆÇೀಸ್ಟರ್ ಮೇಕಿಂಗ್), ಮಣ್ಣಿನ ಆಕೃತಿ(ಕ್ಷೇ ಮಾಡೆಲಿಂಗ್), ಪ್ರಹಸನ (ಸ್ಕಿಟ್), ಏಕಾಂಕ ನಾಟಕ(ಒನ್ ಯಾಕ್ಟ್ ಪ್ಲೇ), ಶಾಸ್ತ್ರೀಯ ಏಕವ್ಯಕ್ತಿ ಗಾಯನ, ಕ್ಲಾಸಿಕಲ್ ಇನ್ಸ್ಟ್ರುಮೆಂಟಲ್ ಸೋಲೋ, ಲಘು ಸಂಗೀತ, ಜಾನಪದ ಸಂಗೀತ, ವಾಕ್ಪಟುತ್ವ ಸ್ಪರ್ಧೆಗಳು, ಚರ್ಚಾಸ್ಪರ್ಧೆ, ರಸಪ್ರಶ್ನೆ, ಛಾಯಾಚಿತ್ರ ಸರ್ಧೆ, ಪ್ರತಿμÁ್ಠಪನಾ ಕಲೆ ಮತ್ತು ಮೆಹಂದಿ, ಪೇಂಟಿಂಗ್, ರಂಗೋಲಿ, ಮೂಕಾಭಿನಯ, ಅನುಕರಣೆ, ಶಾಸ್ತ್ರೀಯ ನೃತ್ಯ, ಜಾನಪದ ಅಥವಾ ಬುಡಕಟ್ಟು ಶೈಲಿ ನೃತ್ಯ, ಕೋಲಾಜ್ ಹಾಗೂ ಕಾರ್ಟೂನಿಂಗ್ ಸ್ಫರ್ಧೆಗಳನ್ನು ಏರ್ಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಗೆ ರಾಜ್ಯದ ನಾನಾ ಭಾಗಗಳಿಂದ ಖ್ಯಾತ ಕಲಾ ಪರಿಣಿತರು ತೀರ್ಪುಗಾರರಾಗಿ ಆಗಮಿಸಲಿದ್ದಾರೆ ಎಂದು ವಿ.ವಿ. ಕುಲಪತಿ ಪ್ರೊ.ದಯಾನಂದ ಅಗಸರ್ ತಿಳಿಸಿದರು.

ಡಿ.30ಕ್ಕೆ ಸಮಾರೋಪ ಸಮಾರಂಭ: ಡಿ.30 ರಂದು ಮಧ್ಯಾಹ್ನ 3 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಮಾರೋಪ ಮತು ಬಹುಮಾನ ವಿತರಣೆ ಸಮಾರಂಭ ನಡೆಯಲಿದ್ದು, ಖ್ಯಾತ ನಟಿ ಚಿತ್ಕಲಾ ಬಿರಾದಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ದಕ್ಷಿಣ ಪೂರ್ವವಲಯ ಅಂತರ್ ವಿಶ್ವವಿದ್ಯಾಲಗಳ ಯುವಜನೋತ್ಸವಕ್ಕೆ ಕಲಬುರಗಿ ಆತಿಥ್ಯ: 2023ರ ಜನವರಿ 27 ರಿಂದ 31ರ ವರೆಗೆ 4 ದಿನಗಳ ದಕ್ಷಿಣ ಪೂರ್ವವಲಯ ಅಂತರ್ ವಿಶ್ವವಿದ್ಯಾಲಗಳ ಯುವಜನೋತ್ಸವಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಆತಿಥ್ಯ ವಹಿಸಲಿದೆ. ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿ ಸಂಸ್ಥೆಯು ಗುಲಬರ್ಗಾ ವಿ.ವಿ.ಗೆ ಆತಿಥ್ಯ ನೀಡಿದ್ದು, ನಮಗೆ ಹೆಮ್ಮೆಯ ವಿಷಯವಾಗಿದೆ. ಕರ್ನಾಟಕ, ಛತ್ತೀಸಗಡ್ ಹಾಗೂ ತೆಲಾಂಗಾಣ ರಾಜ್ಯದ ವಿ.ವಿ.ಗಳು ಇದರಲ್ಲಿ ಭಾಗವಹಿಸಲಿವೆ. ಅಂತರ್ ಮಹಾವಿದ್ಯಾಲಯ ಯುವಜನೋತ್ಸವದಲ್ಲಿ ವಿಜೇತರಾದವರು ಇಲ್ಲಿ ಅರ್ಹತೆ ಪಡೆಯಲಿದ್ದು, ಸುಮಾರು 2,000 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕುಲಪತಿ. ಪ್ರೊ. ದಯಾನಂದ ಅಗಸರ್ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ. ಶರಣಪ್ಪ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಹಾಗೂ ಸಾಂಸ್ಕೃತಿಕ ಸಂಯೋಜಕ ಪೆÇ್ರ. ಕೆ. ಲಿಂಗಪ್ಪ, ಸಮಾಜ ವಿಜ್ಣಾನ ವಿಭಾಗದ ಡೀನ್ ಪೆÇ್ರ.ವಿ.ಟಿ.ಕಾಂಬ್ಳೆ, ಯುವಜನೋತ್ಸವದ ಪ್ರಚಾರ ಸಮಿತಿ ಅಧ್ಯಕ್ಷ ಪೆÇ್ರ.ಎ.ಎಸ್.ಹೊಸಮನಿ ಇದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

1 hour ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago