ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ: ಸಚಿವ ಹಾಲಪ್ಪ ಆಚಾರ್

ಬೆಂಗಳೂರು/ ಬೆಳಗಾವಿ: ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದ್ದು, *ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್* ತಿಳಿಸಿದರು.

ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ “ಖನಿಜ ರಕ್ಷಣಾ ಪಡೆ” ಯ ಗಸ್ತುವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಂತೆ  ಪೆÇೀಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಖನಿಜ ಮತ್ತು ಉಪಖನಿಜಗಳ ಅನಧಿಕೃತ ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಣಿಕೆ ವಿರುದ್ದ ಕ್ರಮಕೈಗೊಳ್ಳಲು ಅಧಿಕಾರ ಪ್ರತ್ಯೋಜಿಸಲಾಗಿರುತ್ತದೆ. ಆದಾಗ್ಯೂ ಸದರಿ ಇಲಾಖೆಗಳಿಂದ ಅಕ್ರಮ ಖನಿಜ ಮತ್ತು ಉಪಖನಿಜಗಳ  ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಕ್ರಮಗಳು ಹೆಚ್ಚಿನ ಪರಿಣಾಮಕಾರಿಯಾಗಿರುವುದಿಲ್ಲ.

ಈ ಹಿನ್ನಲೆಯಲ್ಲಿ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆ  ತಡೆಗಟ್ಟಲು, ಸಂಬಂಧಿಸಿದ ಇಲಾಖೆಗಳಲ್ಲಿನ ಕೆಲಸದ ಒತ್ತಡಗಳಿಂದ ಹೆಚ್ಚಿನ ಯಶಸ್ಸು ಸಾಧ್ಯವಾಗಿರುವುದಿಲ್ಲ.  ಆದ್ದರಿಂದ, ದಿನಾಂಕ: 30-04-2020 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಮೊದಲ ಹಂತದಲ್ಲಿ ಖನಿಜ ರಕ್ಷಣಾ ಪಡೆ ಯನ್ನು ಹೆಚ್ಚಿನ ಖನಿಜ/ ಉಪಖನಿಜ ಗಣಿಗಾರಿಕೆ ಇರುವ 08 ಜಿಲ್ಲೆಗಳಾದ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ಹಾವೇರಿ, ಬೆಳಗಾವಿ, ಕಲಬುರಗಿ, ಕೊಪ್ಪಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲು ಕ್ರಮವಹಿಸಲಾಗಿದೆ. ಖನಿಜ ರಕ್ಷಣಾ ಪಡೆ ಸಮರ್ಥವಾಗಿ ಕಾರ್ಯ ನಿರ್ವಹಿಸಲು  ಪ್ರತಿ ಜಿಲ್ಲೆಗೆ ಹವಾಲ್ದಾರ್ ದರ್ಜೆಯ 03 ನಿವೃತ್ತ ಸೈನಿಕರನ್ನು (Ex-service man) ನೇಮಕಮಾಡಿಕೊಳ್ಳಲಾಗಿದೆ ಮತ್ತು ಜಿಲ್ಲಾ ಖನಿಜ ಪ್ರತಿμÁ್ಠನ ನಿಧಿಯಿಂದ 44 ಹೊಸ ವಾಹನವನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನು ಸಂರಕ್ಷಿಸಿ ಆದಾಯವನ್ನು ಹೆಚ್ಚಿಸಲು ಖನಿಜ ರಕ್ಷಣಾ ಪಡೆ ಸಮರ್ಥವಾಗಿ ಕಾರ್ಯ ನಿರ್ವಹಿಸಲು ವಿದ್ಯಕ್ತವಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಾಲನೆ ನೀಡಲಾಗಿದೆ. ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯದ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆಯನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ಹೇಳಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

7 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420