ಹೋರಾಟಗಾರ ಲಿಂಗರಾಜ ಸಿರಗಾಪೂರಗೆ “ಜನ ಸೇವಾ ರತ್ನ” ಪ್ರಶಸ್ತಿ

0
11

ಕಲಬುರಗಿ: ಕಲ್ಯಾಣ ನಾಡಿನ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಅವರಿಗೆ ವಿವಿಧ ಉದ್ದೇಶ ಸಮಾಜ ಸೇವಾ ಸಮಿತಿ ವತಿಯಿಂದ “ಜನ ಸೇವಾ ರತ್ನ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಸಾಜೀದ ಅಲಿ ರಂಜೋಳ್ವಿ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕನ್ನಡ ಭಾಷೆ ಅಭಿವೃದ್ಧಿ, ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ.ಅಷ್ಟೇ ಅಲ್ಲದೆ ರೈತರ ಪರ ಧ್ವನಿಯಾಗಿ ಸುಮಾರು 20 ವರ್ಷಗಳಿಂದ ನಿಸ್ವಾರ್ಥ ಸಮಾಜ ಸೇವೆಯಲ್ಲಿ ತೊಡಗಿರುವ ಅವರು ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ್ದಾರೆ.ಜನೆವರಿ ಎರಡನೇ ವಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿರಗಾಪೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here