ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಇಂದು ಮಲ್ಲೇಶ್ವರದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ರಾಜ್ಯದ ಸೌಹಾರ್ದ ಸಹಕಾರಿಗಳೊಂದಿಗೆ ಸಂವಾದ ನಡೆಸಿದರು.
ಸೌಹಾರ್ದ ಸಹಕಾರಿಗಳು ಸಹಕಾರಿ ಆದಾಯ ತೆರಿಗೆ ಸಡಲಿಕೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಅಮಿತ್ ಷಾ ಅವರಿಗೆ ಎರಡು ಮನವಿ ಪತ್ರಗಳನ್ನು ಸಲ್ಲಿಸಿದರು. ಅಲ್ಲದೆ ಸಹಕಾರಿ ನಿಯಮಿತಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪದಾಧಿಕಾರಿಗಳು ಬೆಳಕು ಚಲ್ಲಿದರು. ಬೆಂಗಳೂರಿದ ಗುರುರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ಅವ್ಯವಹಾರ ಹಾಗೂ ಗ್ರಾಹಕರಿಗೆ ಆಗಿರುವ ನಷ್ಟದ ಬಗ್ಗೆ ಸಹ ಚರ್ಚೆ ನಡೆಯಿತು. ಆದಾಯಕ್ಕಿಂತ ಹೆಚ್ಚು ವ್ಯಯವಿದ್ದ ಕಡೆ ಪರಿಹಾರ ಸಾಧ್ಯವಿಲ್ಲ. ಆದಷ್ಟು ಮಟ್ಟಿಗೆ ಸಹಕಾರ ಸಂಸ್ಥೆಗಳು ಗ್ರಾಹಕರ ಹಿತರಕ್ಷಣೆ ಕಾಪಾಡಬೇಕೆಂದು ಸಚಿವರು ತಿಳಿಸಿದರು.
ರಾಜ್ಯದೆಲ್ಲೆಡೆ ಹೊಸದಾಗಿ ಸಹಕಾರ ಸಂಸ್ಥೆಗಳನ್ನು ಪ್ರಾರಂಭಿಸುವುದರ ಬದಲಿಗೆ ಇರುವ ಸಂಸ್ಥೆಗಳನ್ನೂ ಪುನರುಜ್ಜೀವನಗೊಳಿಸಿ ಯಶಸ್ವಿಯಾಗಿ ನಡೆಸುಕೊಂಡು ಹೋಗಬೇಕಿದೆ. ಇದರಲ್ಲಿ ಯಶಸ್ಸು ಕಂಡರೆ ಮುಂದಿನ ದಿನಗಳಲ್ಲಿ ಪದಾಧಿಕಾರಿಗಳು ಚುನಾವಣೆ ಎದುರಿಸಿ ಮೇಲ್ಮಟ್ಟಕ್ಕೆ ಬರಲು ಸಾಧ್ಯವಾಗುತ್ತದೆ ಎಂದರು
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ sಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ.ಸದಾನಂದಗೌಡ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷರಾದ ಜಿ.ನಂಜನಗೌಡ ಹಾಗೂ ಸಹಕಾರಿ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…