ಬಿಸಿ ಬಿಸಿ ಸುದ್ದಿ

ಗಡಿ ಸುರಕ್ಷಾ ದಳಗಳ ಕೇಂದ್ರ ಸ್ಥಾನಗಳಲ್ಲಿ ವಸತಿ ಸೌಕರ್ಯ ಅಭಿವೃದ್ಧಿ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಬೆಂಗಳೂರು: ಭಯೋತ್ಪಾದನೆ, ಗಡಿ ವ್ಯಾಜ್ಯಗಳು ಸೇರಿದಂತೆ ದೇಶದ ಹಲವು ಸವಾಲುಗಳಿಗೆ ಸಮಂಜಸ ಪರಿಹಾರ ಕಂಡುಕೊಳ್ಳುವುದು. ದೇಶದ ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವುದು ಸೇರಿದಂತೆ ಎಲ್ಲ ಪೆÇಲೀಸ್ ವಿವಿಧ ದಳಗಳ ನಡುವೆ ಸಮನ್ವಯ ಸಾಧಿಸಿ, ಸಂವಾದ ನಡೆಸಿ ಭದ್ರತೆ ಹೆಚ್ಚಿಸಲು ಪೆÇಲೀಸ್ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ಕೇಂದ್ರ ಗುಪ್ತಚರ ಸಂಸ್ಥೆಯ ತರಬೇತಿ ಶಾಲೆಯು ಮಹತ್ವದ ವೇದಿಕೆಯಾಗಲಿದೆ.ಗಡಿ ಸುರಕ್ಷಾ ದಳಗಳಲ್ಲಿ ಸೇವೆ ನೀಡುವ ಯೋಧರು ಕೇಂದ್ರಸ್ಥಾನಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ವಸತಿ ಸೌಕರ್ಯ ಹೆಚ್ಚಿಸಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ μÁ ಹೇಳಿದರು.

ದೇವನಹಳ್ಳಿ ಸಮೀಪದ  ಆವತಿ ಗ್ರಾಮದಲ್ಲಿ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ, ಬಳಿಕ ಅನಂತ ವಿದ್ಯಾನಿಕೇತನ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತ ಟಿಬೇಟ್ ಗಡಿ ರಕ್ಷಣಾ ದಳ ಬೆಂಗಳೂರು ವಿಭಾಗದ ವಿವಿಧ ಕಟ್ಟಡಗಳನ್ನು  ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು,

2023 ರ ಹೊಸ ವರ್ಷದ ಶುಭಾಶಯಗಳ ತಿಳಿಸುವುದರೊಂದಿಗೆ ಭಾಷಣ ಪ್ರಾರಂಭಿಸಿದ ಅವರು, ಕೇಂದ್ರೀಯ ಗುಪ್ತಚರ ತರಬೇತಿ ಸಂಸ್ಥೆಯ ಕಟ್ಟಡಕ್ಕೆ ರಾಜ್ಯ ಸರ್ಕಾರ ಉತ್ತಮ ಪರಿಸರದಲ್ಲಿ ನಿವೇಶನ ಒದಗಿಸಿದೆ. ಮುಂಬರುವ ದಿನಗಳಲ್ಲಿ  ಬಹಳ ದೇಶದ ಪೆÇಲೀಸ್ ವ್ಯವಸ್ಥೆಗೆ ಬಹಳ ಪ್ರಯೋಜನಕಾರಿಯಾಗಲಿದೆ. ವಿವಿಧ ಪೆÇಲೀಸ್ ದಳಗಳನ್ನು ಬಲಪಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ ಹೆಚ್ಚು ಪೆÇ್ರೀತ್ಸಾಹ ನೀಡಲಾಗುತ್ತಿದೆ. ಸಮಾಜವು ಚಲನಶೀಲವಾಗಿರುತ್ತದೆ ಅದರ ವಿಚಾರ, ಗಮನ, ಧೋರಣೆ, ಸ್ವರೂಪಗಳು ಹಾಗೂ ಪಥ ಬದಲಾಗುತ್ತಿರುತ್ತವೆ. ಅದಕ್ಕೆ ಅನುಗುಣವಾಗಿ ಪೆÇಲೀಸ್ ಬಲಗಳೂ ಕೂಡ ಬದಲಾವಣೆಗಳನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗುತ್ತವೆ. ಸಂಶೋಧನೆ ಆಧರಿಸಿ,ಸುರಕ್ಷತಾ ತಂತ್ರಗಳು,ರಣನೀತಿ ರೂಪಿಸಿಕೊಳ್ಳುವುದು ಮಹತ್ವಪೂರ್ಣವಾಗಿರುತ್ತದೆ. ವಿವಿಧ ಪೆÇಲೀಸ್ ಸಂಸ್ಥೆಗಳ ನಡುವೆ ಸಹಯೋಗ ತರುವುದು ಮಹತ್ವಪೂರ್ಣ ಕಾರ್ಯವಾಗಿದೆ.ಹೊಸ ಕಲಿಕೆ, ಸವಾಲುಗಳ ವಿನಿಮಯದೊಂದಿಗೆ ಎಲ್ಲ ಪೆÇಲೀಸ್ ದಳಗಳು ಪರಿಪೂರ್ಣವಾಗಲು ಸಾಧ್ಯ ಎಂದರು.

ಭಾರತದಂತಹ ದೊಡ್ಡ ದೇಶದಲ್ಲಿ ಹಲವು ಸಂಸ್ಕøತಿ, ಆಚರಣೆಗಳಿವೆ ಅದಕ್ಕೆ ಅನುಗುಣವಾಗಿ ದೇಶದ ಆಂತರಿಕ ಕಾನೂನು ಮತ್ತು ಸುವ್ಯವಸ್ಥೆ ವಿಷಯವನ್ನು ಸಂವಿಧಾನದ ರಾಜ್ಯಪಟ್ಟಿಯಲ್ಲಿರಿಸಲಾಗಿದೆ. ಕಾಲಾಂತರದಲ್ಲಿ ಹೆಚ್ಚಿದ ಭಯೋತ್ಪಾದನೆ, ಆತಂಕವಾದ,ಗಡಿ ವಿವಾದಗಳು ಹೊಸ ಸವಾಲುಗಳನ್ನು ಒಡ್ಡಿವೆ. ಬಿಪಿಆರ್ ಅಂಡ್ ಡಿ ಇಂತಹ ಸವಾಲುಗಳಿಗೆ ಪರಿಹಾರ ಅನ್ವೇಷಿಸುತ್ತದೆ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ದೇಶದ ಮಹಾನಗರಗಳಲ್ಲಿ ಬಹು ಭಾಷಿಕರು ನೆಲೆಸುತ್ತಿದ್ದಾರೆ ಬರುವ ದಿನಗಳಲ್ಲಿ ಅಲ್ಲಿನ ಪೆÇಲೀಸ್ ಕಾರ್ಯವೈಖರಿಗೆ ಅದು ಸವಾಲಾಗುತ್ತದೆ. ಮಹಾನಗರಗಳ ಸುರಕ್ಷತೆಗೂ ಸಂಶೋಧನೆ, ಅಧ್ಯಯನಗಳು ಇಲ್ಲಿ ನಡೆಯಲಿವೆ ಎಂದರು.

ಕಲ್ಕತ್ತಾ, ಹೈದರಾಬಾದ್, ಗಾಜಿಯಾಬಾದ್, ರಾಜಸ್ಥಾನ ಮತ್ತಿತರ ಕಡೆಗಳಲ್ಲಿರುವ ಸಿಡಿಐಟಿ ಸಂಸ್ಥೆಯು ಉತ್ತಮ ಕೊಡುಗೆಗಳನ್ನು ನೀಡುತ್ತಿವೆ. ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯುವ ಅಧ್ಯಯನಗಳು ಕರ್ನಾಟಕ ಹಾಗೂ ನೆರೆಯ ರಾಜ್ಯಗಳ ಪೆÇಲೀಸ್ ತನಿಖೆಗಳಿಗೆ ನೆರವಾಗಲಿವೆ.ಬಿಪಿಆರ್ ಮತ್ತು ಡಿ ಸಂಸ್ಥೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಯೋಗ, ಪೆÇ್ರೀತ್ಸಾಹ ನೀಡಲಿದೆ ಎಂದು ಭರವಸೆ ನೀಡಿದರು.

ದೇಶದ ಗಡಿರಕ್ಷಣೆಗೆ ಹಗಲಿರುಳು ದುಡಿಯುತ್ತಿರುವ ಸೈನಿಕರು ತಮ್ಮ ಕುಟುಂಬಗಳೊಂದಿಗೆ ನೆಮ್ಮದಿಯ ಬದುಕು ನಡೆಸುವಂತಾಗಲು ಗಡಿ ಸುರಕ್ಷಾ ದಳಗಳ ಕೇಂದ್ರ ಸ್ಥಾನಗಳಲ್ಲಿ  ವಸತಿ ನಿರ್ಮಾಣ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆದ್ಯತೆ ನೀಡಿದ್ದಾರೆ. ಇ-ಆವಾಸ್ ಪೆÇೀರ್ಟಲ್ ಮೂಲಕ ವಸತಿ ಸೌಕರ್ಯಗಳ ಸುಧಾರಣೆಯಾಗುತ್ತಿವೆ. ದೇಶದ ಗಡಿ ಸುರಕ್ಷಾ ದಳಗಳಲ್ಲಿಯೇ ಐಟಿಬಿಪಿಯು ಬಹಳ ದುರ್ಗಮ  ಮತ್ತು ವಿಷಮ ವಾತಾವರಣದಲ್ಲಿ ಉತ್ಕೃಷ್ಟ ದೇಶಭಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತದ ಒಂದಿಂಚೂ ಜಮೀನು ಅತಿಕ್ರಮಣವಾಗದಂತೆ ಎಚ್ಚರಿಕೆಯ ದೇಶಸೇವೆ ಮಾಡುತ್ತಿದ್ದಾರೆ. ಐಟಿಬಿಪಿ ಯೋಧರು ಭೀಮವೀರರಾಗಿದ್ದಾರೆ. ಆಯುμÁ್ಮನ್ ಆರೋಗ್ಯ  ಯೋಜನೆ ಮೂಲಕ ಸೈನಿಕರ ಮತ್ತು ಅವರ ಕುಟುಂಬದ ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ μÁ ಹೇಳಿದರು.

ಬೆಂಗಳೂರಿನ ಐಟಿಬಿಪಿ ಕಟ್ಟಡಗಳ ಸಮುಚ್ಛಯದಿಂದ ವರ್ಚುವಲ್ ಆಗಿ ಯೋಧರು ಮತ್ತು ಕುಟುಂಬದ ಸದಸ್ಯರು ಮಾತನಾಡಿ, ವಸತಿ ಸೌಕರ್ಯಗಳ ಬಗ್ಗೆ ಸದಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ,ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ,ಆರೋಗ್ಯ,ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್,ಪೆÇಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ,ಭಾರತ ಟಿಬೇಟ್ ಗಡಿ ಪೆÇಲೀಸ್ ದಳದ ಮಹಾನಿರ್ದೇಶಕ ಅನೀಶ್ ದಯಾಳ್,  ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬ್ಯೂರೋ ಆಫ್ ಪೆÇಲೀಸ್ ರೀಸರ್ಚ್ ಅಂಡ್ ಡೆವಲಪ್‍ಮೆಂಟ್ (ಬಿ.ಪಿ.ಆರ್.ಡಿ.)ಸಂಸ್ಥೆಯಡಿ ಕಾರ್ಯನಿರ್ವಹಿಸುವ ಕೇಂದ್ರಿಯ ಪತ್ತೇದಾರಿ ತರಬೇತಿ   ಸಂಸ್ಥೆಯನ್ನು ಅರ್ಬನ್ ಪೆÇಲೀಸಿಂಗ್ (ಸ್ಮಾರ್ಟ್ ಸಿಟಿ ಪೆÇಲೀಸಿಂಗ್) ಹಾಗೂ ಬ್ಲಾಕ್ ಚೈನ್ ತಂತ್ರಜ್ಞಾನದ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು.ಈ ಕೇಂದ್ರದಲ್ಲಿ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಓಗಳು ಹಾಗೂ ಸಿಎಪಿಎಫ್‍ಗಳ ಪೆÇಲೀಸ್ ಅಧಿಕಾರಿಗಳಿಗೆ ತರಬೇತಿ ಕೋರ್ಸ್‍ಗಳನ್ನು ನೀಡಲಾಗುವುದು.

ಪೆÇಲೀಸ್ ಅಧಿಕಾರಿಗಳ ತನಿಖಾ ಗುಣಮಟ್ಟವನ್ನು ಸುಧಾರಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ. ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಲ್ಲಿ ಈ ಕೇಂದ್ರಕ್ಕಾಗಿ ರಾಜ್ಯ ಸರ್ಕಾರ 35 ಎಕರೆ ಭೂಮಿಯನ್ನು ಒದಗಿಸಿದೆ.

ಬೆಂಗಳೂರಿನಲ್ಲಿರುವ ಇಂಡೋ ಟಿಬೆಟಿಯನ್ ಬಾರ್ಡರ್ ಪೆÇಲೀಸ್ ಪ್ರಾದೇಶಿಕ ಪ್ರಧಾನ ಕಛೇರಿಯ ಹಲವು ಯೋಜನೆಗಳ ಉದ್ಘಾಟಿಸುವರು.120 ಸೈನಿಕರ ಬ್ಯಾರಕ್‍ಗಳು, 42 ವಸತಿ ಕಟ್ಟಡಗಳು, ಜಂಟಿ ಆಡಳಿತಾತ್ಮಕ ಕಟ್ಟಡಗಳು ಹಾಗೂ ಅಧಿಕಾರಿಗಳ ಹಾಗೂ ಅಧೀನ ಅಧಿಕಾರಿಗಳ ಮೆಸ್ ಕಟ್ಟಡಗಳನ್ನು  ಆನ್‍ಲೈನ್ ಮೂಲಕ ಉದ್ಘಾಟನೆಗೊಳಿಸಲಾಯಿತು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago