ಬಿಸಿ ಬಿಸಿ ಸುದ್ದಿ

ಗಣಿತದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಗಣಿತ ದಿನದ ಉದ್ದೇಶ

ಶಹಾಬಾದ: ಗಣಿತದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಯುವಕರಲ್ಲಿ ಗಣಿತ ಕಲಿಕೆಯಿಂದ ಆಗುವ ಉಪಯೋಗಗಳನ್ನು ತಿಳಿಸುವುದು, ಗಣಿತ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಸರಕಾರಿ ಪ್ರೌಢಶಾಲೆಯ ಶಿಕ್ಷಕ ವಿಷ್ಣುತೀರ್ಥ ಆಲೂರ ಹೇಳಿದರು.

ಅವರು ಭಂಕೂರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಭಾರತದ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ನಿಮಿತ್ತ ಆಯೋಜಿಸಲಾದ ರಾಷ್ಟ್ರೀಯ ಗಣಿತ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಣಿತ ಕಲಿಕೆಯ ಅವಶ್ಯಕತೆ ಬಹಳ ಮುಖ್ಯವಾಗಿದೆ. ಲೆಕ್ಕ ಬಂದಾಗ ಮಾತ್ರ ಜೀವನ ಚೊಕ್ಕ ಇಂದಿನ ವಿದ್ಯಾರ್ಥಿಗಳು ಗಣಿತ ವಿಷಯದಲ್ಲಿ ಆಸಕ್ತಿಯನ್ನು ಹೊಂದಬೇಕು. ಗಣಿತ ವಿಷಯದಲ್ಲಿ ಜಗತ್ತನ್ನೇ ಬೆರಗಾಗಿಸಿದ ಸರ್ವಶ್ರೇಷ್ಠ ಗಣಿತ ತಜ್ಞ ಶ್ರೀನಿವಾಸ ರಾಮಾನುಜನ್, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕು. ಇಂದಿನ ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಕೂಡಾ ಕ್ರೀಯಾಶೀಲತೆಯನ್ನು ಹೊಂದಬೇಕೆಂದು. ಗಣಿತ ಕ್ಷೇತ್ರಕ್ಕೆ ಶ್ರೀನಿವಾಸ ರಾಮಾನುಜನ್ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಶಿಕ್ಷಕ ದತ್ತಪ್ಪ ಕೋಟನೂರ್ ಮಾತನಾಡಿ, ಈ ದೇಶದ ಖ್ಯಾತಿಯನ್ನು ವಿಶ್ವದೆತ್ತರಕ್ಕೆ ಪಸರಿಸಿದ ಕೀರ್ತಿಗೆ ಭಾಜನರಾಗಿರುವ ರಾಮಾನುಜನ್ ತಮ್ಮ ಜೀವನದಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದಾರೆ. ‘ಗಣಿತ ಎಂದರೆ ಕಠಿಣವಾದ ವಿಷಯ ಎನ್ನುವ ಮಕ್ಕಳು ಈ ಕಾರ್ಯಕ್ರಮದ ಮೂಲಕ ಹೆಚ್ಚಿನ ಆಸಕ್ತಿ ತೋರಿಸುವಂತಾಗಬೇಕು.

ರಾಮನುಜನ್ ಶ್ರೀನಿವಾಸರವರ ಬದುಕಿನ ವಿವಿಧ ಪ್ರಮುಖ ಘಟ್ಟಗಳನ್ನು ವಿವರಿಸಿ, ಕಬ್ಬಿಣದ ಕಡಲೆ ಎಂದುಕೊಳ್ಳುವ ವಿಧ್ಯಾರ್ಥಿಗಳು ಗಣಿತವನ್ನು ಹೇಗೆ ತಮ್ಮದಾಗಿಸಿಕೊಳ್ಳಬಹುದೆಂದು ತಿಳಿಸಿದರು.

ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ, ಶಿಕ್ಷಕರಾದ ಎನ್.ಡಿ.ಜಕಾತೆ,ಸೀತಮ್ಮ.ಎನ್, ಶಾಂತಮಲ್ಲ ಶಿವಭೋ, ಅನೀಲಕುಮಾರ,ಅರ್ಚನಾ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago