ಹಾಸ್ಟೆಲ್ ಕಾರ್ಮಿಕರಿಗೆ ಶಾಸನಬದ್ಧ ಸೌಲಭ್ಯಕ್ಕೆ ಹರ್ಷ

0
114

ವಾಡಿ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ವಸತಿ ನಿಲಯಗಳು, ವಸತಿ ಶಾಲೆಗಳು ಮತ್ತು ವಸತಿ ಕಾಲೇಜುಗಳ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರಾದ ಮುಖ್ಯ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರು, ಸ್ವಚ್ಛತೆ ಮತ್ತಿತರ ಕಾರ್ಮಿಕರಿಗೆ ಶಾಸನ ಬದ್ಧ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ನೀಡುವಂತೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಎಐಯುಟಿಯುಸಿ ಕಾರ್ಮಿಕ ಸಂಘಕ್ಕೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯಗಳ ಕಾರ್ಮಿಕರ ಸಂಘ ಸ್ವಾಗತಿಸಿದೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯಗಳ ಕಾರ್ಮಿಕರ ಸಂಘದ ಚಿತ್ತಾಪುರ ತಾಲೂಕು ಅಧ್ಯಕ್ಷ ಶರಣು ಹೇರೂರ ಹಾಗೂ ತಾಲೂಕು ಕಾರ್ಯದರ್ಶಿ ಸಂತೋಷ ದೊಡ್ಡಮನಿ ಸರ್ಕಾರದ ತೀಕ್ಷಣ ನಿರ್ಧಾಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ವಸತಿ ನಿಲಯಗಳ ಹೊರಗುತ್ತಿಗೆ ಕಾರ್ಮಿಕರ ನಿರಂತರ ಹೋರಾಟ ಮತ್ತು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದಲ್ಲಿ ಎತ್ತಲಾದ ಕನಿಷ್ಟ ವೇತನ ಪಾವತಿ, ವಾರದ ರಜೆ, ಎಂಟು ಗಂಟೆಗಳ ದುಡಿಮೆ ಅವಧಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಾರ್ಮಿಕರ ಸಂಖ್ಯೆ ಹೆಚ್ಚಿಸುವುದು ಸೇರಿದಂತೆ ಇಪಿಎಫ್ ಹಾಗೂ ಇಎಸ್‍ಐ ಮತ್ತಿತರ ಸೌಕರ್ಯಗಳನ್ನು ನೀಡದ ಗುತ್ತಿಗೆ ಏಜೆನ್ಸಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿತ್ತು. ಸಂಘದ ಬೇಡಿಕೆಗಳನ್ನು ಒಪ್ಪಿಕೊಂಡ ರಾಜ್ಯ ಸರ್ಕಾರ ಮತ್ತು ಇಲಾಖೆಯು ಈ ಸಂಬಂಧ ಡಿ.28 ರಂದು ಸುತ್ತೋಲೆ ಹೊರಡಿಸಿರುವುದು ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಪ್ರತಿಕ್ರೀಯಿಸಿದ್ದಾರೆ.

ಕನಿಷ್ಠ ವೇತನ ಕೊಡದಿರುವ ಏಜೆನ್ಸಿಗಳ ಮೇಲೆ ಎಫ್‍ಐಆರ್ ದಾಖಲಿಸುವುದಾಗಿ ಸರ್ಕಾರ ಹೇಳಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚು ಇರುವ ಕಡೆ ಹೆಚ್ಚುವರಿ ಅಡಿಗೆ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ವಾಗ್ದಾನ ಮಾಡಿದೆ. ವಾರದ ರಜೆ, ರಾತ್ರಿ ಮತ್ತು ಹಗಲು ವೇಳೆಯಲ್ಲಿ 8 ಗಂಟೆಗಳ ಕಾಲ ಮಾತ್ರ ಕಾರ್ಯನಿರ್ವಹಿಸುವುದು ಕಡ್ಡಾಯ ಗೊಳಿಸಲಾಗಿದೆ. ಇಎಸ್‍ಐ, ಇಪಿಎಫ್ ಪಾವತಿಸದಿರುವ ಏಜೆನ್ಸಿಗಳ ಮೇಲೆ ಎಫ್‍ಐಆರ್ ದಾಖಲಿಸಲು ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಅಧಿಕಾರ ನೀಡಿ ಹೊರಡಿಸಿರುವ ಸರ್ಕಾರದ ಈ ಸುತ್ತೋಲೆಯನ್ನು ಚಾಚು ತಪ್ಪದೇ ಎಲ್ಲಾ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜಾರಿಗೊಳಿಸಬೇಕೆಂದು ಎಂದು ಕಾರ್ಮಿಕ ನಾಯಕರು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here