ಬಿಸಿ ಬಿಸಿ ಸುದ್ದಿ

ಗುಲಾಬಿ ಆಂದೋಲನ ಕಾರ್ಯಕ್ರಮದ ನಿಮಿತ್ತ ಜಾಥಾ

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೊಶ ಮತ್ತು ಶಿಕ್ಷಣ ಇಲಾಖೆ, ಇವರುಗಳು ಸಂಯುಕ್ತಾಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ, ಗೊಬ್ಬುರ್ (ಬಿ ), ತಾಲೂಕಾ ಆಫಜಲಪುರದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದ ಜಾಥಾ ಉದ್ಘಾಟನೆಯನ್ನು ಶಿವಾನಂದ ಅಲ್ದಿ , ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಗೊಬ್ಬುರು (ಬಿ)ರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸರಕಾರಿ ಶಾಲೆಯ ಮುಖ್ಯ ಗುರುಗಳಾದ ಶ್ರೀ ವನಕಿನಾಳರವರುಮತ್ತು ಸಿಬ್ಬಂದಿ ವರ್ಗದವರು ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮ ವನ್ನು ಶಶಿಧರ್ ವಿ ಬಳಿ, ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿಗಳು ನಡೆಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೊಶದ ಸೋಶಿಯಲ್ ವರ್ಕರ್ ಆದಆರತಿ ಧನಶ್ರೀ, ರವಿಚಂದ್ರ ಪೂಜಾರಿ, ಡಿ.ಇ.ಒ.ಎನ್. ಸುಧಾಕರ್, ಆರ್. ಕೆ. ಎಸ್. ಕೆ ಆಪ್ತಸಮಾಲೋಚಕರು, ಉದಯ ಅರೋಗ್ಯ ನೀರಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಗುಲಾಬಿ ಆಂದೋಲನದಲ್ಲಿ ಶಾಲಾ ಮಕ್ಕಳು ತಂಬಾಕು ನಿಷೇಧ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಾ, ಬೀದಿ ಅಂಗಡಿಗಳ ಮಾಲೀಕರಿಗೆ ಗುಲಾಬಿ ಹೂವು ನೀಡಿ, ಆಂದೋಲನದ ಮೂಲಕ ಅರಿವು ಮೂಡಿಸಿ, ತಂಬಾಕು ತ್ಯಜಿಸಿ, ಇದು ಈ ಆಂದೋಲನದ ಉದ್ದೇಶ ಎಂದು ಅಂಗಡಿಗಳ ಮಾಲೀಕರಿಗೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮದೇ ಆದ ಭಾಷೆಯಲ್ಲಿ ತುಂಬಾ ಮಾರ್ಮಿಕವಾಗಿ ಮಾಹಿತಿ ನೀಡಿದರು. ಸದರಿ ಕಾರ್ಯಕ್ರಮದಲ್ಲಿ ಆರಕ್ಷಕ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago