ಬಿಸಿ ಬಿಸಿ ಸುದ್ದಿ

ಅದಮ್ಯ ಚೇತನಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ

ಬೆಂಗಳೂರು: ಅದಮ್ಯ ಚೇತನ ಸಂಸ್ಥೆ ನಡೆಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯಂತಹ ಹೊಸ ಸಾಧ್ಯತೆಗಳ ಬಗ್ಗೆ ಮಾನ್ಯ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್‌ ಷಾ ಬಹಳಷ್ಟು ಕುತೂಹಲದಿಂದ ವೀಕ್ಷಿಸಿದರು.

ಇಂದು ಬೆಂಗಳೂರು ನಗರದ ಗವಿಪುರಗುಟ್ಟಳ್ಳಿಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ – ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಿ, ಅಡುಗೆ ಮನೆಯಲ್ಲಿ ಪ್ರತಿನಿತ್ಯ ನಡೆಯುವಂತಹ ಅಡುಗೆ ತಯಾರಿಯ ಕೆಲಸಗಳ ಬಗ್ಗೆ ವಿಸ್ತ್ರತವಾಗಿ ಮಾಹಿತಿ ಪಡೆದುಕೊಂಡರು. ಅದಮ್ಯ ಚೇತನ ಸಂಸ್ಥೆ ಸ್ಥಾಪನೆಯ ಹಿಂದೆ ದಿವಂಗತ ಅನಂತಕುಮಾರ್‌ ಅವರ ಅದಮ್ಯ ಕನಸುಗಳ ಬಗ್ಗೆ ಡಾ. ತೇಜಸ್ವಿನಿ ಅನಂತಕುಮಾರ್‌ ಗೃಹ ಸಚಿವರಿಗೆ ವಿವರಣೆ ನೀಡಿದರು.

ಪ್ರತಿ ನಿತ್ಯ ಸುಮಾರು 70 ಸಾವಿರಕ್ಕೂ ಹೆಚ್ಚು ಊಟಗಳನ್ನ ಈ ಅಡುಗೆ ಮನೆಯಲ್ಲಿ ತಯಾರಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಥರಹದ ತ್ಯಾಜ್ಯ ಉತ್ಪತ್ತಿಯಾಗುವುದಿಲ್ಲ. ಹಾಗೆಯೇ, ಉಪಯೋಗಿಸಿದ ನೀರಿನ ಮರುಬಳಕೆಯನ್ನು ಮಾಡಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನ ಬಳಸದೇ ಅಡುಗೆ ಮಾಡುವುದು ಈ ಅಡುಗೆ ಮನೆಯ ಮತ್ತೊಂದು ವಿಶೇಷ ಎಂದು ವಿವರಿಸಿದರು. ಅವರ ಚಿಂತನೆಯ ಹಾದಿಯಲ್ಲಿಯೇ ನಾವುಗಳು ಹಸಿರು ಭಾನುವಾರ, ದೇಗುಲ ದರ್ಶನ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಸಮಾಜ ಸೇವೆಯಂತಹ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೀವಿ. ಹಾಗೆಯೇ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನ ಬೆಳಸುತ್ತಿರುವುದನ್ನೂ ಕೇಳಿ ಸಂತಸ ಪಟ್ಟರು.

ನಂತರ ಅನಂತ ಸೇವಾ ಉತ್ಸವದಲ್ಲಿ ಭಾಗವಹಿಸಿ “ತೇಜಸ್‌ ಯುದ್ದವಿಮಾನ ಅಭಿವೃದ್ದಿಯ ಯಶೋಗಾಥೆ” ಎನ್ನುವ ಪುಸ್ತಕದ ಕನ್ನಡ ಅವತರಣಿಕೆಯನ್ನು ಲೋಕಾರ್ಪಣೆಗೊಳಿಸಿದರು. ಸಂಪೂರ್ಣ ಸ್ವದೇಶಿ ನಿರ್ಮಿತ ತೇಜಸ್‌ ಯುದ್ದವಿಮಾನದ ವಿನ್ಯಾಸದಲ್ಲಿ ಡಾ. ತೇಜಸ್ವಿನಿ ಅನಂತಕುಮಾರ್‌ ಅವರು ಸೇವೆ ಸಲ್ಲಿಸಿದ್ದರು, ಈ ಪುಸ್ತಕದ ಕನ್ನಡ ಅವತರಣಿಕೆಯ ಲೋಕಾರ್ಪಣೆಯ ಸಂಧರ್ಭದಲ್ಲಿ ಅವರ ಸಹದ್ಯೋಗಿಗಳು ನೆನೆಪಿಸಿಕೊಂಡರು.

ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯ ಪ್ರಭಾರಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕಂದಾಯ ಸಚಿವರಾದ ಆರ್‌ ಅಶೋಕ, ಸಹಕಾರ ಸಚಿವರಾದ ಎಸ್‌ ಟಿ ಸೋಮಶೇಖರ್‌, ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ನಂದಕುಮಾರ್‌, ಪ್ರದೀಪ್‌ ಓಕ್‌, ಐಶ್ಚರ್ಯ ಅನಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago