ಕಲಬುರಗಿ: ವೈಚಾರಿಕ ಹಾಗೂ ವೈಜ್ಞಾನಿಕ ಚಿಂತಕ ಡಾ.ಹುಲಿಕಲ್ ನಟರಾಜ್ ಅವರಿಗೆ 60 ವರ್ಷದ ತುಂಬಿದ ಈ ಸಂದರ್ಭದಲ್ಲಿ ಅವರ ಕುರಿತಾದ “ಹುಲಿಹೆಜ್ಜೆ” ಅಭಿನಂದನ ಗ್ರಂಥವನ್ನು ಜನವರಿ 4ರಂದು ಬುಧವಾರ ಬೆಳಗ್ಗೆ 10ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ರಾಷ್ಟೀಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹಾಗೂ “ಹುಲಿಹೆಜ್ಜೆ” ಅಭಿನಂದನ ಗ್ರಂಥಸಮಿತಿಯ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ ಹಾಗೂ ಅಭಿನಂದನ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ ತಿಳಿಸಿದ್ದಾರೆ.
ಹುಲಿಕಲ್ ನಟರಾಜ್ ಕುರಿತಾಗಿ ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಚಿಂತಕರು ಬರೆದ ಲೇಖನಗಳನ್ನು ಸಂಗ್ರಹಿಸಿ ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಮತ್ತು ವಿ.ಟಿ.ಸ್ವಾಮಿ ಇವರ ಸಂಪಾದಕತ್ವದ “ಹುಲಿಹೆಜ್ಜೆ” ಎನ್ನುವ ಅಭಿನಂದನ ಗ್ರಂಥವನ್ನು ಹೊರತರಲಾಗಿದೆ ಎಂದು ಹೇಳಿದ್ದಾರೆ.
ಅಂದು ಬೆಳಗ್ಗೆ 10ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯವನ್ನು ನಿಡುಮಾಮಿಡಿ ಮಠದ ವೀರಭದ್ರಚನ್ನಮಲ್ಲ ದೇಶಿಕೇಂದ್ರ ಸ್ವಾಮಿಜಿಯವರು ವಹಿಸಲಿದ್ದು, ಖ್ಯಾತ ವಿಜ್ಞಾನಿ ಹಾಗೂ ಇಸ್ರೋದ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣಕುಮಾರ ಅವರು ಉದ್ಘಾಟಿಸಲಿದ್ದಾರೆ, ಮಾಜಿ ಲೋಕಾಯುಕ್ತ ಎನ್.ಸಂತೋμï ಹೆಗಡೆಯವರು “ಹುಲಿಹೆಜ್ಜೆ” ಅಭಿನಂದನ ಗ್ರಂಥವನ್ನು ಬಿಡುಗಡೆಗೊಳಿಸಲಿದ್ದಾರೆ. ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಹುಲಿಕಲ್ 60 ಕಿರುಚಿತ್ರ ಬಿಡುಗಡೆ ಮಾಡುವರು ಎಂದು ತಿಳಿಸಿದ್ದಾರೆ.
ಕರ್ನಾಟಕ ಗಡಿಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಹುಲಿಕಲ್ ನಟರಾಜ್ ಅವರ ಕುರಿತು ಅಭಿನಂದಿಸಲಿದ್ದಾರೆ. ವೇದಿಕೆಯಲ್ಲಿ ಡಾ.ಹುಲಿಕಲ್ ನಟರಾಜ್, ಪ್ರಜಾಪ್ರಗತಿ ಎಸ್.ನಾಗಣ್ಣ, ಪವರ್ ಟಿ.ವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ವಿಸ್ತಾರ ಟಿ.ವಿಯ ಧರ್ಮೇಶ್, ರಾಜ್ ಟಿವಿಯ ಅರವಿಂದ್ ಸಾಗರ್, ವಿಜಯ ಟೈಮ್ಸ್ ನ ವಿಜಯಲಕ್ಷ್ಮೀ ಶಿಬರೂರು, ಪ್ರಮುಖರಾದ ವಿನಯಗೌಡ, ಡಾ.ಆಂಜನಪ್ಪ, ವೈ.ಎನ್.ಶಂಕರ್ ಗೌಡ, ಎಸ್.ಕೆ.ಉಮೇಶ್, ಪ್ರದೀಪ್ ಈಶ್ವರ್, ಮೊದಲಾದವರು ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ಟಿ.ಎಸ್.ನಾಗಭರಣ ವಹಿಸಿಕೊಳ್ಳಲಿದ್ದಾರೆ.
ಹಲವು ಗೋಷ್ಠಿಗಳನ್ನು ಏರ್ಪಡಿಸಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…