ಕಲಬುರಗಿ: ಕೆಪಿಸಿಸಿ ಉತ್ತರ ಕರ್ನಾಟಕದ ಸಮನ್ವಯ ಸಮಿತಿ ಸದಸ್ಯರಾಗಿ ಕಲಬುರಗಿಯ ಶಿವಾನಂದ ಹೊನಗುಂಟಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆದೇಶಿಸಿದ್ದಾರೆ.
ಸಮನ್ವಯ ಸಮಿತಿಯಲ್ಲಿ ಶಾಸಕರು, ಎಂಎಲ್‍ಸಿಗಳು, ಮಾಜಿ ಎಂಎಲ್‍ಎ, ಮಾಜಿ ಎಂಎಲ್‍ಸಿಗಳಿಗೆ ಮಣೆ ಹಾಕಲಾಗಿದ್ದು, ಇದರಲ್ಲಿ ಯುವಕರ ಕೋಟಾದಡಿ ಶಿವಾನಂದ ಅವರನ್ನು ಪರಿಗಣಿಸಿ ಪಕ್ಷದ ಹೊಣೆ ವಹಿಸಲಾಗಿದೆ. ಈಗಾಗಲೇ ಕಲಬುರಗಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರೀಯರಾಗಿದ್ದಾರೆ.
ಮುಂಬರುವ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಪಕ್ಷ ಸಂಘಟನೆ, ಸಂಭಾವ್ಯ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕಾರ್ಯಪ್ರವೃತ್ತರಾಗುವಂತೆ ಮುನ್ಸೂಚನೆ ನೀಡಲಾಗಿದೆ. ಹಿರಿಯ ಮುಖಂಡರಗಳನ್ನು ರಾಜ್ಯಾದ್ಯಂತ ಪ್ರವಾಸ ಮಾಡಲು ಪ್ರವಾಸಿ ಮಾರ್ಗಸೂಚಿ ಪಟ್ಟಿ ಸಿದ್ಧಪಡಿಸಲಾಗಿದೆ. ಇದಕ್ಕೆ ಜಿಲ್ಲೆಯ ಮತ್ತು ವಿಧಾನಸಭಾ ಕ್ಷೇತ್ರವಾರು ಮುಖಂಡರ ಜತೆ ಸಮನ್ವಯ ಸಾಧಿಸಿ ಪಕ್ಷದ ಸಂಘಟನೆ ಚುರುಕುಗೊಳಿಸಲು ಆದೇಶಿಸಲಾಗಿದೆ.
ಈ ನಿಟ್ಟಿನಲ್ಲಿ ವಿವಿಧ ಬ್ಲಾಕ್‍ಗಳ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾತ್ರೆ ಯಶಸ್ಸಿಗೆ ಪೂರ್ವಸಿದ್ಧತಾ ಸಭೆ ಕರೆದು ಸಲಹೆ ಸೂಚನೆ ಪಡೆದುಕೊಳ್ಳುವಂತೆ ಪಕ್ಷದ ವರಿಷ್ಠರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…