ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಯುವ ಜಾಗೃತಿ

0
9

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಗರದ ಬಸವೇಶ್ವರ ಪತ್ತಿನ ಸಹಕಾರ ಸಂಘದ ಭವನದಲ್ಲಿ ಯುವ ಜಾಗೃತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ಇಂದು ತಾಲೂಕಿನಲ್ಲಿಯ ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟು ಹಾಗೂ ಜಾಗೃತಿ ತುಂಬಾ ಅವಶ್ಯವಾಗಿದೆ,ಕೇಂದ್ರ ಸರಕಾರ ವೀರಶೈವ ಲಿಂಗಾಯತ ಸಮುದಾಯವನ್ನು 2ಎ ಗೆ ಸೇರಿಸಬೇಕು ಮತ್ತು ರಾಜ್ಯದಲ್ಲಿನ ವೀರಶೈವ ಲಿಂಗಾಯತ ಸಮುದಾಯದ ಜನರ ಜಾಗೃತಿಗಾಗಿ ರಾಜ್ಯ ಸಮಿತಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಹಾಗೂ ತಾಲೂಕಿನಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನ ಜಾಗೃತಿ ಮೂಡಿಸಬೇಕು ಎಂದರು.ಅಲ್ಲದೆ ಈಗಾಗಲೇ ವೀರಶೈವ ಕಲ್ಯಾಣ ಮಂಟಪ ಬಳಿಯಲ್ಲಿ ನೂತನ ಬಸವೇಶ್ವರರ ಮೂರ್ತಿ ಅನಾವರಣ ಕಾರ್ಯಕ್ರಮವೂ ಶೀಘ್ರದಲ್ಲೆ ನಡೆಯಲಿದ್ದು ಆ ಕಾರ್ಯಕ್ರಮದ ಯಶಸ್ಸಿಗೆ ನಾವೆಲ್ಲರು ಶ್ರಮವಹಿಸೋಣ ಎಂದರು.

Contact Your\'s Advertisement; 9902492681

ತಾಲೂಕಿನ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ನಮ್ಮ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿ ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ನಡೆಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚೆಚ್ಚು ಜನರು ಭಾಗವಹಿಸುವಂತೆ ತಿಳಿಸಬೇಕು ಎಂದರು.

ಕಾರ್ಯಕ್ರಮದ ವೇದಿಕೆ ಮೇಲೆ ಮುಖಂಡರಾದ ಮಲ್ಲಣ್ಣ ಸಾಹು ಮುಧೋಳ,ಸೂಗುರೇಶ ವಾರದ್,ಬಸವರಾಜ ಬೂದಿಹಾಳ,ವಿರೇಶ ನಿಷ್ಠಿ ದೇಶಮುಖ ಇದ್ದರು,ಮಹಾಸಭೆಯ ತಾಲೂಕು ಅಧ್ಯಕ್ಷ ಮಂಜುನಾಥ ಜಾಲಹಳ್ಳಿ ಅಧ್ಯಕ್ಷತೆ ವಹಿಸಿದ್ದರು,ಯುವ ಘಟಕದ ತಾಲೂಕು ಅಧ್ಯಕ್ಷ ಶಿವರಾಜ ಕಲಕೇರಿ ನೇತೃತ್ವ ವಹಿಸಿದ್ದರು.ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಅನೇಕ ಮುಖಂಡರು ಹಾಗೂ ತಾಲೂಕು ಮತ್ತು ನಗರ ಯುವ ಘಟಕದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here