ಕಲಬುರಗಿ: ರಾಜ್ಯ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆ ಸಾಕಾರಕ್ಕೆ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರು 1.17 ಕೋಟಿ ರೂ. ವಂತಿಗೆ ನೀಡುವ ಮೂಲಕ ಗೋಮಾತೆಯ ಸೇವೆಗೆ ಕೈಜೋಡಿಸಿದ್ದಕ್ಕಾಗಿ ಸಮಸ್ತ ನೌಕರ ಬಂಧುಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಧನ್ಯವಾದ ತಿಳಿಸಿದ್ದಾರೆ.
ದೇಶದ ಸಂಸ್ಕೃತಿ ಮತ್ತು ಸಂಪತ್ತಿನ ಪ್ರತೀಕವಾಗಿರುವ ಗೋವುಗಳ ಸಂತತಿ ಸಂರಕ್ಷಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಣ್ಯಕೋಟಿ ಯೋಜನೆ ಜಾರಿಗೆ ತಂದು, ಗೋವುಗಳ ದತ್ತು ಪಡೆಯಲು ರಾಜ್ಯದ ಸಮಸ್ತ ಜನತೆಗೆ ಕರೆ ನೀಡಿದರು.
ಮುಖ್ಯಮಂತ್ರಿಗಳ ಕರೆಗೆ ಓಗೊಟ್ಟು ಕಲಬುರಗಿ ಜಿಲ್ಲೆಯ ಸಮಸ್ತ ಸರ್ಕಾರಿ ಅಧಿಕಾರಿಗಳು-ನೌಕರರು ಕಳೆದ ನವೆಂಬರ್ ಮತ್ತು ಡಿಸೆಂಬರ್ ಮಾಹೆಯ ವೇತನದಿಂದ ನಿರ್ದಿಷ್ಟ ಮೊತ್ತ ಕಡಿತ ಮಾಡಿದ್ದು, ಒಟ್ಟಾರೆ 1,17,73,400 ರೂ. ವಂತಿಗೆ ನೀಡುವ ಮೂಲಕ ಯೋಜನೆಯ ಸುಗಮ ಅನುಷ್ಟಾನಕ್ಕೆ ನೆರವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತಾಲೂಕುವಾರು ನೌಕರರ ವಂತಿಗೆ ಮೊತ್ತ;
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…