ಸುರಪುರ: ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ

0
11

ಸುರುಪುರ: ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಹಿಂದುಳಿದವರು ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಟ್ಯಾಲೆಂಟ್ ಕರಿಯರ್ ಅಕಾಡೆಮಿ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಕೆಎಎಸ್, ಪಿಎಸ್ಐ, ಪಿ ಸಿ, ಎಸ್ಡಿಎ, ಎಫ್ಡಿಎ, ಆರ್ಆರ್ಬಿ, ಎಸ್.ಎಸ್.ಸಿ ಮುಂತಾದವುಗಳ ಕುರಿತು ಪರೀಕ್ಷಾ ಪೂರ್ವ ತರಬೇತಿಯ ಒಂದು ದಿನದ ಉಚಿತ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಯ ಶ್ರುತಿ ಅವರು ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ತಿಪ್ಪಾರೆಡ್ಡಿ ಮಾಲಿ ಪಾಟೀಲ್ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸುರಪುರ ಇವರು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲು ಕೌಶಲ್ಯವನ್ನು ಒಳಗೊಂಡಂತೆ ನಿರಂತರ ವಿದ್ಯಾಭ್ಯಾಸ ಮಾಡುವುದರ ಮೂಲಕ ಯಶಸ್ವಿಯಾಗಿ ಸ್ವಹಜೀವನ ಉತ್ತಮವಾಗುವುದರ ಜೊತೆಗೆ ದೇಶದ ಸಮಗ್ರ ಅಭಿವೃದ್ಧಿಗೆ ಸಹಕಾರವಾಗುತ್ತದೆ ಎಂದು ಹೇಳಿದರು.

Contact Your\'s Advertisement; 9902492681

ಮುಖ್ಯ ಅತಿಥಿಯಾಗಿ ಆಗಮಿಸಿರುವ ಸಂತೋಷ್ ರೆಡ್ಡಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಯಾದಗಿರಿ ಇವರು ಮಾತನಾಡಿ, ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಹೆಚ್ಚಿಸಲು ಇಲಾಖೆ ವತಿಯಿಂದ ಆಯೋಜಿಸಿರುವ ಈ ತರಬೇತಿಯ ಸದುಪಯೋಗ ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.

ಟ್ಯಾಲೆಂಟ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಅರ್ಜುನ್ ಸಾಗರ್ ಅವರು ಮಾತನಾಡಿ ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯು ತುಂಬಾ ಕಠಿಣವಾಗಿದ್ದು ಅದನ್ನು ಎದುರಿಸಲು ಮಾರ್ಗದರ್ಶನ ಜೊತೆಗೆ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕ್ರಮಬದ್ಧವಾಗಿ ಅಭ್ಯಾಸ ಮಾಡಿದರೆ ಉನ್ನತ ಸಾಧನೆ ಮಾಡಬಹುದೆಂದು ಹೇಳಿದರು.

ಅತಿಥಿಗಳಾಗಿ ತಾಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣ ಅಧಿಕಾರಿ ಮೊಮ್ಮದ್ ಸಲೀಂ, ತಾಲೂಕು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಗ್ಯಾನಪ್ಪ ಮೇಟಿ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ಸುಮಾರು 500ಕ್ಕೂ ಹೆಚ್ಚು ಸ್ಪರ್ಧಾಂಕ್ಷಿಗಳು ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here