ಬಿಸಿ ಬಿಸಿ ಸುದ್ದಿ

ಕಲಾಪ್ರದರ್ಶನಕ್ಕೆ ‘ಚಿತ್ರಸಂತೆ’ ಒಳ್ಳೆಯ ವೇದಿಕೆಯಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳ್ರರು: ಒಳ್ಳೆಯ ಕಲಾವಿದರಿಗೆ ವೇದಿಗೆ ಕಲ್ಪಿಸುವಲ್ಲಿ ಈ ಚಿತ್ರಸಂತೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ 20 ನೇ ವರ್ಷದ ‘ಚಿತ್ರಸಂತೆ’ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ್ದರು.

ಚಿತ್ರಕಲೆ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಮಾಧ್ಯಮವಾಗಿದೆ. ಇದು ಮನಸ್ಸಿಗೆ ಸಂತೋಷವನ್ನು ಉಂಟು ಮಾಡುತ್ತದೆ. ಬೆಲೆ ಬಾಳುವ ವಜ್ರದಂತೆ ಚಿತ್ರಕಲೆ ಅಮೂಲ್ಯವಾದ ಸಂಪತ್ತು. ಜನ ಸಾಮಾನ್ಯರಿಗೆ ಚಿತ್ರಕಲೆ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರಸಂತೆ ಒಂದು ಒಳ್ಳೆಯ ಚಿತ್ರಕಲಾ ಪ್ರದರ್ಶನವಾಗಿದೆ.

ದೇಶದ, ರಾಜ್ಯದ ವಿವಿದೆಡೆ ಚಿತ್ರಕಲೆ ಸಂಸ್ಕøತಿಯನ್ನು ಪಸರಿಸುವ ಕೆಲಸ ಆಗಬೇಕಿದೆ. ಚಿತ್ರಕಲಾ ಪರಿಷತ್ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಸಂಸ್ಥೆಯಾಗಿದೆ. ಮುಂಬರುವ ವರ್ಷದಿಂದ ಶನಿವಾರ ಮತ್ತು ಭಾನುವಾರ 2 ದಿನಗಳ ಕಾಲ ಚಿತ್ರಸಂತೆ ನಡೆಸಲು ಉದ್ದೇಶಿಸಲಾಗಿದೆ. ಈ ಬಾರಿ 19 ರಾಜ್ಯಗಳು ಸುಮಾರು 1600 ಕಲಾವಿದರು ಈ ಚಿತ್ರಸಂತೆಯಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ‌ ಪರಿಷತ್ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್ ಪ್ರಸ್ತಾವಿಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವÀ ಡಾ. ಸಿ. ಎನ್. ಅಶ್ವಥ್‍ನಾರಾಯಣ, ಸಂಸದ ಪಿ.ಸಿ. ಮೋಹನ್, ಶಾಸಕ ರಿಜ್ವಾನ್ ಅರ್ಷದ್, ಖ್ಯಾತ ಕಲಾವಿದರಾದ ಪ್ರೋ. ಲಕ್ಷ್ಮ ಗೌಡ್ ಹಾಗೂ ಇನ್ನಿತರ ಕಲಾಸಕ್ತರು, ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಚಿತ್ರಸಂತೆ ವೀಕ್ಷಕರು ಹಾಜರಿದ್ದರು. ಚಿತ್ರಸಂತೆಯಲ್ಲಿ ಕಲಾವಿದರಿಂದ ವಿವಿಧ ಬಗೆಯ ಚಿತ್ರಕಲೆಗಳ ಪ್ರದರ್ಶನ ಹಾಗೂ ಮಾರಟವನ್ನು ಸಹ ಹಮ್ಮಿಕೊಳ್ಳಲಾಗಿತ್ತು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

5 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

16 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

16 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

19 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

19 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

19 hours ago