ಗ್ರಾ.ಪಂ ಅಧ್ಯಕ್ಷರಾಗಿ ಶರಣಮ್ಮ ಅವಿರೋಧ ಆಯ್ಕೆ

0
10

ಸುರಪುರ: ತಾಲೂಕಿನ ಖಾನಾಪುರ ಎಸ್.ಹೆಚ್ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ.ಖಾನಾಪುರ ಎಸ್.ಹೆಚ್ ಗ್ರಾಮ ಪಂಚಾಯತಿಗೆ ಬಿಜೆಪಿ ಬೆಂಬಲಿತ ಶರಣಮ್ಮ ವೀರಭದ್ರಪ್ಪ ಕುದರಿ ಅವಿರೋಧವಾಗಿ ಆಯ್ಕೆಯಾದರು.

ಸೋಮವಾರ ಮುಂಜಾನೆಯಿಂದಲೂ ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾರೂ ನಾಮಪತ್ರ ಸಲ್ಲಿಸದೆ ಕೇವಲ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಣೆ ಮಾಡಿದರು.

Contact Your\'s Advertisement; 9902492681

ನಂತರ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಂಕರ ನಾಯಕ,ರಾಜಾ ರಂಗಪ್ಪ ನಾಯಕ,ಭೀಮಣ್ಣ ಬೇವಿನಾಳ ಸೇರಿದಂತೆ ಅನೇಕ ಮುಖಂಡರು ಹಾಗೂ ಗ್ರಾಮ ಪಂಚಾಯತಿಯ ಅನೇಕ ಸದಸ್ಯರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here