ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಇದೇ ಜನವರಿ 10 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಚಂದ್ರೇಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ವಹಿಸುವರು. ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಸೇರಿದಂತೆ ಜಿಲ್ಲೆಯ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಗಣ್ಯ ವ್ಯಕ್ತಿಗಳು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…
ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…