ಕಲಬುರಗಿ: ಮಹಾಗಾಂವ ಹಿರಿಯ ಪ್ರಾಥಮಿಕ ಶಾಲೆಯಿಂದ ಮಹಾಗಾಂವ ತಾಂಡ ಹಾಗೂ ಮಡಕಿ ತಾಂಡಾದ ವಿದ್ಯಾರ್ಥಿಗಳಿಗೆ ಮನೆಗೆ ವಯುತ್ತಿದ ಬೂಲೇರೊ ಪಿಕಪ್ ವಾಹನ ತಪ್ಪಿ ಪಲ್ಟಿಯಾಗಿ 8 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ಮಹಾಗಾಂವ ಗ್ರಾಮದ ಹೊರವಲಯದಲ್ಲಿ ಸಂಜೆ ನಡೆದಿದೆ.
15 ವರ್ಷದ ಸಂಜನಾ,ಸ್ಪೂರ್ತಿ,ಸಚೀನ,ಶಾಲಿನಿ, ಪಾಯಲ್ ಸೇರಿದಂತೆ ಇನ್ನೂ 8 ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು ತುರ್ತು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರತಿದಿನ ವಿದ್ಯಾರ್ಥಿಗಳು ಶಾಲೆಯ ವಿದ್ಯಾಭ್ಯಾಸಕ್ಕಾಗಿ ಮಹಾಗಾಂವ ತಾಂಡ ಹಾಗೂ ಮಡಕಿ ತಾಂಡಾದ ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದು ಎಂದಿನಂತೆ ಇಂದು ಸಹ ತಮ್ಮ ಮನೆಗೆ ತೆರಳಲು ಖಾಸಗಿ ವಾಹನದ ಮುಖಾಂತರ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಸಂಭವಿಸಿದೆ.
ಘಟನಾ ಸ್ಥಳದಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ. ರವಿ ಚವ್ಹಾಣ ಅಪಘಾತದ ಮಾಹಿತಿ ಪಡೆದು ತಕ್ಷಣ ಸ್ಪಂದಿಸಿ ಸರ್ಕಾರಿ ಆಸ್ಪತ್ರೆಯ ಮುಖ್ಯಸ್ಥರಿಗೆ ಸಂಪರ್ಕಿಸಿ ತುರ್ತು ಚಿಕಿತ್ಸೆಗಾಗಿ ಏರ್ಪಡಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ರವಾನಿಸಲು ಪರದಾಡುವ ಮೂಲಕ ಮಾನವಿಯತೆ ಮೇರೆದಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…