ನಾಳೆ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗ«ಳಿಗೆ ನಿಗಮದ ಸ್ವತ್ತು ವಿತರಣೆ

0
36

ನಾಳೆ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ
ಅರಿವು ಜಾಗೃತಿ-ನಿಗಮದ ಸ್ವತ್ತು ವಿತರಣಾ ಕಾರ್ಯಕ್ರಮ ಉದ್ಘಾಟನೆ

ಕಲಬುರಗಿ: ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ಅರಿವು ಜಾಗೃತಿ, ನಿಗಮದ ಸೌಲಭ್ಯ ಕುರಿತು ಕಾರ್ಯಾಗಾರ ಹಾಗೂ ನಿಗಮದ ಸ್ವತ್ತು ವಿತರಣಾ ಕಾರ್ಯಕ್ರಮವನ್ನು ಜನವರಿ 11 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

Contact Your\'s Advertisement; 9902492681

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಮ್. ಶಿವಣ್ಣ ಕೋಟೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ವಹಿಸುವರು. ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಹಾಗೂ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಉಪಸ್ಥಿತಿ ವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ. ವೆಂಕಟೇಶ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ವಿದ್ಯಾಸಾಗರ ವಿ. ಶಹಾಬಾದ್, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅವಿನಾಶ ಕುಲಕರ್ಣಿ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಬಿ. ಮಲ್ಲಿಕಾರ್ಜುನ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here