ವಿಜಯನಗರ: ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗುರುಭವನದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ವತಿಯಿಂದ ಅಕ್ಷರ ಮಾತೆಯರು ಸಾವಿತ್ರಿ ಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ರವರ ಜಯಂತೋತ್ಸವವನ್ನು ಆಚರಿಸಲಾಯಿತು.
ಶಿಕ್ಷಕಿ ಸೀಮಾರವರು ಕಾರ್ಯಕ್ರಮದ ನಿರೂಪಣೆ, ಸ್ವಾಗತ ಭಾಷಣವನ್ನು ಸೋಮಶೇಖರ್ ರವರು ಮಾಡಿದರು.ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸಿ.ಹನುಮಕ್ಕ, ಮಂಗಳಾ.ಟಿ, ಎಂ.ರಾಜು ಮತ್ತು ಆನಂದ್ ಕಡ್ಲಿ ಅವರನ್ನು ಸನ್ಮಾನಿಸಲಾಯಿತು.
ದಿನದ ವಿಶೇಷ ಉಪನ್ಯಾಸವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎನ್. ಚಿನ್ನಸ್ವಾಮಿ ಸೋಸಲೆ ರವರು ಮಾಡಿದರು.
ದಲಿತ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ ಘಟಕದ ಅಧ್ಯಕ್ಷರಾದ ಹನುಮೇಶ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಬಿ. ಬಿ. ಜಿ. ಗೌತಮ್ ಹಾಗೂ ಕಾರ್ಯದರ್ಶಿ ರಾಮಾನಾಯ್ಕ್ ಉಪಸ್ಥಿತರಿದ್ದರು.
ಹಾಗೂ ಕೂಡ್ಲಿಗಿ, ಹಡಗಲಿ, ಹರಪನಹಳ್ಳಿ ತಾಲೂಕಿನ ಪದಾಧಿಕಾರಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…