ಕಲಬುರಗಿ: ಸದಾ ಹೊಸತನದಿಂದ ಕೂಡಿರುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸಭಾ ಭವನವೊಂದರಲ್ಲಿ ಜಿಲ್ಲೆಯ ಲೇಖಕರ ಕೃತಿಗಳ ಪ್ರದರ್ಶನ ನಿರಂತರವಾಗಿ ಇರಲಿ ಎಂಬ ಉದ್ದೇಶದಿಂದ ಪುಸ್ತಕ ಪ್ರದರ್ಶನದ ಶಾಶ್ವತ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಪ್ರಯುಕ್ತ ಜಿಲ್ಲೆಯ ಲೇಖಕರು ತಮ್ಮ ಪ್ರಕಟಿತ ಒಂದು ಕೃತಿಯನ್ನು ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭವನ, ಸರದಾರ ವಲ್ಲಭಬಾಯಿ ಪಟೇಲ್ ವೃತ್ತ, ಕಲಬುರಗಿ ಈ ವಿಳಾಸಕ್ಕೆ ಕಳುಹಿಸಿಕೊಡಲು ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ. 98803 49025 ಗೆ ಸಂಪರ್ಕಿಸಲು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಕೋರಿದ್ದಾರೆ.
ಈ ಭಾಗದಲ್ಲಿ ಅನೇಕ ಹಿರಿಯ ಮತ್ತು ಯುವ ಬರಹಗಾರರು ಸಾಹಿತ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಅಂಥ ಲೇಖಕರ ಪ್ರಕಟಿತ ಕೃತಿಗಳನ್ನು ಈ ಭಾಗದ ಸಾಹಿತ್ಯಾಸಕ್ತರಿಗೆ ಪರಿಚಯಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಹಿರಿಯ ಸಾಹಿತಿಗಳ ಪುಸ್ತಕಗಳು ಇಂದಿನ ಹೊಸ ಪೀಳಿಗೆಗೆ ದಾರಿದೀಪವಾಗಬಲ್ಲವುದಲ್ಲದೇ, ಜ್ಞಾನವೂ ಸಹ ಸಿಗಲಿದೆ ಎಂದು ಅವರು ವಿವರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…