ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ

0
260

ಕಲಬುರಗಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳ ಒಳಗಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.

Contact Your\'s Advertisement; 9902492681

ಅರ್ಹ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ 2023ರ ಫೆಬ್ರವರಿ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ www.dbcdc.karnataka.gov.in  ವೆಬ್‍ಸೈಟ್‍ನ್ನು, ನಿಗಮದ ಸಹಾಯವಾಣಿ ಸಂಖ್ಯೆ: 080-22374832, 805077004 & 6, 7090400100/ 7090400900 ಅಥವಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು, ಕಚೇರಿ ದೂರವಾಣಿ ಸಂಖ್ಯೆ: 08472-278635ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here