ಯುವಕರು ರಾಷ್ಟ್ರ ಕಟ್ಟುವ ಕಾರ್ಯ ಮಾಡಿ

0
132

ಕಲಬುರಗಿ: ಇಂದಿನ ಯುವಕರು ಅನೇಕ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ನೋವಿನ ಸಂಗತಿಯಾಗಿದೆ. ಯುವಕರು ದುಶ್ಚಟಗಳಿಂದ ದೂರವಿದ್ದು, ನಿಶ್ಚಿತ ಗುರಿಯೊಂದಿಗೆ ನಿರಂತರ ಅಧ್ಯಯನ ಮಾಡಬೇಕು. ಮಾನವೀಯ ಮೌಲ್ಯಗಳು, ದೇಶಪ್ರೇಮ, ಸೃಜನಶೀಲತೆಯಂತಹ ಗುಣಗಳನ್ನು ಬೆಳೆಸಿಕೊಂಡು ದೇಶದ ಅಮೂಲ್ಯ ಆಸ್ತಿಯಾಗುವ ಮೂಲಕ ರಾಷ್ಟ್ರ ಕಟ್ಟುವ ಕಾರ್ಯ ಮಾಡಬೇಕು ಎಂದು ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ಹಣಮಂತರಾಯ ಎಸ್.ಅಟ್ಟೂರ್ ಯುವಕರಿಗೆ ಕರೆ ನೀಡಿದರು.

ನಗರದ ರಾಮ ಮಂದಿರ ಸಮೀಪವಿರುವ ‘ಕೊಹಿನೂರ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನ-ರಾಷ್ಟ್ರೀಯ ಯುವ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಅಲ್ಲಿನ ಯುವಕರ ಪಾತ್ರ ತುಂಬಾ ಪ್ರಮುಖವಾಗಿದೆ. ಇಡೀ ಯುವ ಸಮೂಹದ ಚೇತನಾ ಶಕ್ತಿಯಾದ ವಿವೇಕಾನಂದ ಅವರು ನೀಡಿದ ಸಂದೇಶವನ್ನು ಪ್ರತಿಯೊಬ್ಬ ಯುವಕ ಅಳವಡಿಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವಿದೆ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ.ಹಣಮಂತರಾಯ ಬಿ.ಕಂಟೆಗೋಳ್ ಮಾತನಾಡಿ, ಯುವಕರು ಹೇಡಿಗಳಾಗಬಾರದು ಪುರುಷ ಸಿಂಹಗಳಾಗಬೇಕು, ನೀವು ಎಂದೂ ಪರಾವಲಂಬಿಗಳಾಗಬಾರದು, ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂದು ಪ್ರತಿಪಾದಿಸುತ್ತಿದ್ದ ಸ್ವಾಮಿ ವಿವೇಕಾನಂದರು, ಯುವ ಜನರಿಗೆ ನೀಡಿರುವ ಒಂದೊಂದು ಸಂದೇಶವೂ ಒಂದೊಂದು ಜೀವನ ಧರ್ಮವಾಗಿದೆ. ಹೀಗಾಗಿಯೇ ಸ್ವಾಮಿ ವಿವೇಕಾನಂದರ ಹೆಸರು ಕೇಳಿದರೆ, ಅಕ್ಷರಶಃ ರೋಮಾಂಚನವಾಗುತ್ತದೆ. ಯುವಕರು ವಿವೇಕವಾಣಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡಬೇಕಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ಕಾರ್ಯಕ್ರಮದಲ್ಲಿ ಬಳಗದ ಅಧಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಸದಸ್ಯ ಶಿವಯೋಗಪ್ಪ ಬಿರಾದಾರ, ನಿವೃತ್ತ ಪ್ರಾಂಶುಪಾಲ ಪ್ರೊ.ವಿ.ಎಂ.ಹಿರೇಮಠ, ಪ್ರಮುಖರಾದ ರೋಹಿಣಿ ತೋರಣ, ಶಂಭುಲಿಂಗ ವಗ್ದರಗಿ, ಗಾಯತ್ರಿ ಕೆ., ಸಂತೋಷ, ಸತೀಶ್ ಪಾಟೀಲ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here