ರೈತರ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

0
16

ಸುರಪುರ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವ ಸಂಘಟನೆ ವತಿಯಿಂದ ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಬಾವಿ ಮಾತನಾಡಿ,ಸರಕಾರಗಳು ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ,ಇದರಿಂದ ಇಂದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.ಆದರೆ ತಮ್ಮ ಪರಸ್ಥಿತಿಯ ಅರಿವಿಲ್ಲದೆ ಸಿದ್ದರಾಮಯ್ಯ ಬಂದಾ ಎಂದು,ನರೇಂದ್ರ ಮೋದಿ ಬಂದಾ ಎಂದು ಓಡಿ ಹೋಗುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

Contact Your\'s Advertisement; 9902492681

ಸರಕಾರಗಳು ಕೂಡಲೇ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು ಮತ್ತು ಉತ್ಪನ್ನಗಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಹಾಗೂ ಕಳೆದ ಮೂರು ತಿಂಗಳುಗಳ ಹಿಂದೆ ಸುರಿದ ಮಹಾಮಳೆಯಿಂದ ಬೆಳೆ ನಷ್ಟಕ್ಕೊಳಗಾದ ರೈತರಲ್ಲಿ ಕೆಲವರಿಗೆ ಮಾತ್ರ ಪರಿಹಾರದ ಹಣ ಬಂದಿದ್ದು ಎಲ್ಲಾ ರೈತರಿಗೆ ಪರಿಹಾರದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು,ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ತಹಸೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಹಣಮಂತ್ರಾಯ ಮಡಿವಾಳ ಚಂದಲಾಪುರ, ಮುಖಂಡರಾದ ಶಿವನಗೌಡ ರುಕ್ಮಾಪುರ,ಮಾನಪ್ಪ ಅರಳಹಳ್ಳಿ,ಭೀಮಣ್ಣ ತಿಪ್ಪನಟಗಿ,ವೆಂಕಟೇಶಗೌಡ ಕುಪ್ಪಗಲ್,ಇಮಾಮಸಾಬ್ ತಿಪ್ಪನಟಗಿ,ರಾಘು ಕುಪಗಲ್,ವೆಂಕೋಬ ದೊರಿ ಕುಪ್ಪಗಲ್,ಭೀಮನಗೌಡ ಕರ್ನಾಳ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here