ಕಾಯಕ ಸಂಭ್ರಮ 13: ಕಾಯಕ ಫೌಂಡೇಶನ್ ಶಾಲಾ-ಕಾಲೇಜು ವಾರ್ಷಿಕೋತ್ಸವ

ಕಲಬುರಗಿ: ಕಾಯಕ ಫೌಂಡೇಶನ್ ಶಿಕ್ಷಣ ಸಂಸ್ಥೆ ಕಲ್ಬುರ್ಗಿ ವತಿಯಿಂದ, ಕಾಯಕ ಫೌಂಡೇಶನ್ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಸತಿ ಸಹಿತ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಕೆಸರಟಗಿ ರಸ್ತೆಯ ಕಾಲೇಜಿನಲ್ಲಿ ವಾರ್ಷಿಕೋತ್ಸವ 2023 – ಸಂಭ್ರಮದಿಂದ ನೆರವೇರಿತು.

ವಿದ್ಯಾರ್ಥಿಗಳಲ್ಲಿ ಕೀಳರಿಮೆಯ ಬೇಡ ರಮೇಶ್ ಬಲ್ಲಿದ ಕಾಯಕ ಫೌಂಡೇಶನ್ ಶಿಕ್ಷಣ ಸಂಸ್ಥೆ ವತಿಯಿಂದ ಕಾಯಕ ಸಂಭ್ರಮ 13ರ ಶಾಲಾ-ಕಾಲೇಜು ವಾರ್ಷಿಕೋತ್ಸವದಲ್ಲಿ ಹೆಡ್ ಹೆಲ್ಡ್ ಹೈ ಫೌಂಡೇಶನ್ ಮುಖ್ಯಸ್ಥರಾದ ರಮೇಶ್ ಬಲ್ಲಿದ್ ಮಾತನಾಡಿ ಮಕ್ಕಳಲ್ಲಿ ಕೀಳರಿಮೆ, ಖಿನ್ನತೆಯಿಂದ ಹೊರಬಂದಲ್ಲಿ ಮಾತ್ರ ತಮ್ಮಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು ಹಾಗೂ ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಅತ್ಯಂತ ಮಹತ್ವವಾಗಿದೆ ಎಂದು ಹೇಳಿದರು, ಮಕ್ಕಳಲ್ಲಿ ಇರುವ ಅಗಾಧ ಶಕ್ತಿಯನ್ನು ಪಾಲಕರು ಗುರುತಿಸಿ, ಅವರ ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪಾಲಕರು ಸದಾ ಮಾರ್ಗದರ್ಶನ ನೀಡಬೇಕೆಂದು ಪಾಲಕರಲ್ಲಿ ಮನವಿ ಮಾಡಿದರು. .

ಮುಖ್ಯ ಅತಿಥಿಗಳಾದ ಲೋಕ ರೆಡ್ಡಿ ಸರ್, ಸೀನಿಯರ್ ಮ್ಯಾನೇಜರ್ ಮೈಕ್ರೋ ಇಂಡಿಯಾ ಹೈದರಾಬಾದ್ ಮಾಸ್ಟರ್ ಇನ್ ಕಂಪ್ಯೂಟರ್ ನೆಟ್ವರ್ಕ್, ಮಕ್ಕಳು ಹಿರಿಯರಿಗೆ ಸದಾ ಗೌರವ ನೀಡುವ ಸ್ವಭಾವ ಬೆಳೆಸಿಕೊಳ್ಳಬೇಕು ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸಬೇಕಾದರೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಸವಾಲು ಎದುರಿಸುವ ಸಾಮರ್ಥ್ಯ ಮಕ್ಕಳಲ್ಲಿ ಬರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ ಪೂಜ್ಯ ಶ್ರೀ ವಿಶ್ವನಾಥ್ ಕರುಣೆಶ್ವರ ಸ್ವಾಮಿಗಳು, ಸಂಚಾಲಕರು ಶ್ರೀ ತೋಂಟದಾರ್ಯ ಅನುಭವ ಮಂಟಪ ಆಳಂದ್, ಮಾತನಾಡಿ ಮಕ್ಕಳಲ್ಲಿ ದ್ವೇಷ ಭಾವನೆಗಳನ್ನು ಬಿತ್ತದೇ ಮಕ್ಕಳಲ್ಲಿ ಮಾನವೀಯ ಮೌಲ್ಯಗಳಾದ ಪ್ರೀತಿ ಕರುಣೆ ಸಹಕಾರ ಸಹಬಾಳ್ವೆ ಆದರ್ಶ ಭಾವನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.

ಬಿಲ್ವ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ರೇಣುಪ್ರಸಾದ್ ಚಿಕ್ಕಮಠ್ ಅವರು ಮಾತನಾಡಿ ಇಂದಿನ ಯುವ ಪೀಳಿಗೆ ದುಶ್ಚಟಗಳಿಂದ ಮುಕ್ತವಾಗಿ ತಮ್ಮ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕಾಯಕ ಫೌಂಡೇಶನ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಶ್ರೀ ಶಿವರಾಜ್ ಪಾಟೀಲರು ಮಾತನಾಡಿ ಜಗತ್ತನ್ನೇ ಬದಲಾಯಿಸುವ ಪ್ರಮುಖ ಅಸ್ತ್ರವೆಂದರೆ ಶಿಕ್ಷಣ, ಶಿಕ್ಷಣವು ವ್ಯಕ್ತಿಯ ಬೆಳವಣಿಗೆಗೆ ಹಾಗೂ ವ್ಯಕ್ತಿಯನ್ನು ಸ್ವಾವಲಂಬಿಯನ್ನಾಗಿ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ಕಾಯಕ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸಪ್ನಾ ರೆಡ್ಡಿ ಎಸ್ ಪಾಟೀಲ್ರು ಅಧ್ಯಕ್ಷತೆ ವಹಿಸಿದ್ದರು. ಸ್ವಾಗತ ಭಾಷಣ ವೀರೇಶ್ ಕಲಕೋರಿ, ಪಿಯುಸಿ ಪ್ರಥಮ ವರ್ಷದ ಮಕ್ಕಳಿಂದ ಪ್ರಾರ್ಥನಾ ಗೀತೆ ಹಾಡಿದರು,,. ಏ .ಡಿ. ಪಾಟೀಲ್ ನಿರೂಪಣೆ ಮಾಡಿದರು ಕಾರ್ಯಕ್ರಮದಲ್ಲಿ ನಾಗರಾಜ್ ಕಾಮ, ಗೋವಿಂದ ಕುಲಕರ್ಣಿ, ಉಪನ್ಯಾಸಕರು ಹಾಗೂ ಶಿಕ್ಷಕರು,ಪಾಲಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಶಾಲಾ ಕಾಲೇಜು ಮಕ್ಕಳಿಂದ ದೇಶಭಕ್ತಿ ಗೀತೆ, ವಚನ ನೃತ್ಯ, ಭರತನಾಟ್ಯ, ರೂಪಕ ಹಾಗೂ ಕಿತ್ತೂರು ಚೆನ್ನಮ್ಮ ನಾಟಕ ಮನೋಸೂರೆ ಗೊಳ್ಳುವ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಅತಿ ವಿಜ್ರಂಬಣೆಯಿಂದ ನಡೆದವು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

7 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

10 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

15 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

17 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420