ಕಲಬುರಗಿ: ಭೀಮಾ ನದಿಯ ಪ್ರವಾಹದಿಂದಾಗಿ ಜಿಲ್ಲೆಯ ಹಲವಾರು ಕಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕೃಷಿ ಜಮೀನುಗಳಿಗೆ ನೀರು ನುಗ್ಗಿದೆ. ಹಲವಾರು ಕಡೆ ಬ್ರಿಜ್ ಗಳು ನೀರಿನಲ್ಲಿ ಮುಳುಗಡೆಯಾಗಿದ್ದು ಸಂಚಾರ ವ್ಯವಸ್ಥೆಯಲ್ಲಿ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಪ್ರಿಯಾಂಕ್ ಖರ್ಗೆ ಅವರು ನೆರೆಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಜನರ ಕಷ್ಟ ಆಲಿಸಿದಿರು.
ಘತ್ತರಗಾ, ಗಣಗಾಪುರ ಮತ್ತು ಸಂಗಮ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳೊಂದಿಗೆ ಪರಿಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಪಡೆದು, ಅಗತ್ಯ ಕ್ರಮ ಕೈಗೊಳ್ಳವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಫಜಲಪುರ ಕ್ಷೇತ್ರದ ಶಾಸಕ ಎಂ ವೈ ಪಾಟೀಲ್ ಸೇರಿದಂತೆ ಮತ್ತಿತರಿದ್ದರು.