ಬಿಸಿ ಬಿಸಿ ಸುದ್ದಿ

1.2 ಲಕ್ಷ ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಆರ್.ಅಶೋಕ

ಕಲಬುರಗಿ: ದೇಶದ ಇತಿಹಾಸದಲ್ಲಿಯೇ ಐತಿಹಾಸಿಕವಾಗಿ ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ, ಹಾಗೂ ಆಡಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಠಿಯಿಂದ 1 ಲಕ್ಷ 2 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

ಶುಕ್ರವಾರ ಕಲಬುರಗಿ ನಗರದ ಐವಾನ್-ಎ-ಶಾಹಿತಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊದಲನೇ ಹಂತವಾಗಿ ಜನವರಿ 19ಕ್ಕೆ ಕಲಬುರಗಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ಸೇರಿ 5 ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಇದಾದ ನಂತರ ಮುಂದಿನ ತಿಂಗಳ ಎರಡನೇ ಹಂತದಲ್ಲಿ ಬಂಜಾರಾ ಸಮುದಾಯ ಆರಾದ ಧೈವ ಸಂತ ಸೇವಾಲಾಲ ಮಹಾರಾಜರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇದೇ ರೀತಿಯಲ್ಲಿ ಹಕು ಪತ್ರ ವಿತರಣೆ ಮಾಡಲಾಗುತ್ತಿದೆ. ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿಸಿ ಮೂಲಸೌಕರ್ಯ ಒದಗಿಸುವ ಕಂದಾಯ ಇಲಾಖೆಯ ಕ್ರಾಂತಿಕಾರಿ ಹೆಜ್ಜೆ ಇದಾಗಿದೆ ಎಂದರು.

ರಾಜ್ಯ ಹೆದ್ದಾರಿ-10ಕ್ಕೆ ಹೊಂದಿಕೊಂಡ ಮಳಖೇಡ್‍ದಲ್ಲಿ ಸುಮಾರು 150 ಎಕರೆ ವಿಶಾಲ ಪ್ರದೇಶದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಫಲಾನುಭವಿಗಳು ಸೇರಿದಂತೆ 1.50 ಲಕ್ಷ ಜನರು ಸೇರುವ ನಿರೀಕ್ಷೆವಿದ್ದು, ಇವರಿಗಾಗಿ 2,382 ಬಸ್ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆ ಕೆಲಸಗಳು ಭರದಿಂದ ನಡೆದಿವೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಊಟಕ್ಕಾಗಿ 200 ಕೌಂಟರ್ ತೆರೆಯಲಾಗುತ್ತದೆ. ಕಾರ್ಯಕ್ರಮ ಸ್ಥಳದಲ್ಲಿ ಮುಂಜಾಗ್ರತೆಯಾಗಿ ಅಂಬುಲೆನ್ಸ್, ಅಗ್ನಿಶಾಮಕ ವಾಹನಗಳನ್ನು ತೈನಾತಿರಲಿವೆ. ಭದ್ರತೆ ಒದಗಿಸಲು ಪೊಲೀಸರ ತಂಡವೇ ಅಲ್ಲಿ ಠಿಕಾಣಿ ಹೂಡಲಿದೆ. ಫಲಾನುಭವಿಗಳನ್ನು ಕರೆತರಲು ಬಸ್ ವ್ಯವಸ್ತೆ ಸರ್ಕಾರದಿಂದಲೇ ಮಾಡಲಾಗಿದ್ದು, ಕಂದಾಯ ಇಲಾಖೆಯ ಸಿಬ್ಬಂದಿಗಳು ಇದರ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಸಚಿವರು ವಿವರಣೆ ನೀಡಿದರು.

ಮೂಲಸೌಕರ್ಯಕ್ಕೂ ಬದ್ಧ: ತಾಂಡಾ ನಿವಾಸಿಗಳೀಗೆ ಬರೀ ಹಕ್ಕು ಪತ್ರ ವತರಿಸಿ ಕೈ ತೊಳೆದುಕೊಳ್ಳುವುದಿಲ್ಲ. ಬದಲಾಗಿ ಉಪ ನೊಂದಣಾಕಾರಿಗಳ ಕಚೇರಿಯಲ್ಲಿ ಪ್ರಸ್ತುತ ಫಲಾನುಭವಿ ವಾಸಿಸುವ ಸ್ಥಳಕ್ಕನುಗುಣವಾಗಿ ಅವರ ಹೆಸರಿಗೆ ನೋಂದಣಿ ಮಾಡಿಸಲಾಗುವುದು. ಇದಕ್ಕಾಗಿ ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಮುಂದಿನ 2-3 ತಿಂಗಳ ಅವಧಿಗೆ ಪ್ರತಿನಿತ್ಯ 1 ಗಂಟೆ ಇವರ ನೋಂದಣಿಗೆ ಸಮಯ ಮೀಸಲಿರಿಸಲಾಗುವುದು. ನೋಂದಣಿ ನಂತರ ಸದರಿ ಪ್ರದೇಶವು ಗ್ರಾಮೀಣಾಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಅಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಶೌಚಾಲಯ, ದೀಪ ದೀಪ ಹೀಗೆ ಎಲ್ಲಾ ಮೂಲಸೌಕರ್ಯಗಳನ್ನು ಸಹ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಆರ್.ಅಶೋಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಡಾ.ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಎನ್.ರವಿಕುಮಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಡಿ.ಸಿ. ಯಶವಂತ ವಿ. ಗುರುಕರ್, ಬೆ.ಜಿ.ಪಿ. ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಇದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

4 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

15 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

15 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

17 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

17 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

17 hours ago