ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಮತದಾನ ಅಧಿಕಾರ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪಿಗೆ ಯುವ ಕಾಂಗ್ರೆಸ್ ಸಂಯೋಜಕ ಶಿವಾನಂದ ಆರ್ ಕಿಳ್ಳಿ ಸರಡಗಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಚುನಾವಣಾ ಮತದಾರರ ಪಟ್ಟಿಯಲ್ಲಿ ಐವರು ವಿಧಾನ ಪರಿಷತ್ ಸದಸ್ಯರಿಗೆ ಮತದಾನ ಅಧಿಕಾರ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಮೇಯರ್ ಚುನಾವಣೆಯಲ್ಲಿ 55 ಸದಸ್ಯರ ಜೊತೆಗೆ ಪಾಲಿಕೆ ವ್ಯಾಪ್ತಿಯ ನಿವಾಸಿಗಳಾಗಿರುವ ಪರಿಷತ್, ಲೋಕಸಭಾ, ರಾಜ್ಯಸಭಾ ಸದಸ್ಯರಿಗೆ ಮತದಾನ ಹಕ್ಕು ಇರಲಿದೆ, ಇದರ ಜೊತೆಗೆ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ತುಳಸಿ ಮುನಿರಾಜುಗೌಡ, ಭಾರತಿ ಶೆಟ್ಟಿ, ರಘುನಾಥ್ ರಾವ್ ಮಲ್ಕಾಪೂರೆ, ಲೇಹರ್ ಸಿಂಗ್ ಅವರು ಕಲಬುರಗಿ ನಿವಾಸಿಗಳಲ್ಲ ಎಂಬುದು ಇಡೀ ರಾಜ್ಯಕ್ಕೆ ಗೊತ್ತು ಇದರ ಹೊರತಾಗಿಯೂ ಹೈಕೋರ್ಟ್ ವಿಭಾಗೀಯ ಪೀಠವು ಮತದಾನದ ಹಕ್ಕು ನೀಡಿರುವುದು ಸರಿಯಲ್ಲ ಎಂದು ಶಿವಾನಂದ ಆರ್ ಕಿಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಗರು ಸುಳ್ಳು ದಾಖಲೆ ಸೃಷ್ಟಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರಯತ್ನ ಮಾಡಿದ್ದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಷಯ. ಹಿಗಿದ್ದರು ನ್ಯಾಯ ಪಾಲನೆ ಮಾಡಬೇಕಿದ್ದ ನ್ಯಾಯಾಲಯವೆ ಈ ತರಹ ಎಡವಿದರೆ ಜನ ಸಾಮಾನ್ಯರಿಗೆ ನ್ಯಾಯ ಸಿಗುವುದು ಹೇಗೆ? ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ, ಬಿಜೆಪಿ ಸರಕಾರ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಕಳ್ಳ ದಾರಿಯಲ್ಲಿ ಹೋಗುವುದು ಮುಂದುವರಿಸಿದ್ದು ನಾಚಿಕೆಗೇಡಿನ ಪ್ರವೃತ್ತಿ ಎಂದು ಕಿಡಿ ಕಾರಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…