ಕಲಬುರಗಿ: ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಪ್ರಮೋದ್ ಮುತಾಲಿಕ್ ನನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೀರ್ ಹುಸೇನ್ ಒತ್ತಾಯಿಸಿದರು.
ಈ ಬಗ್ಗೆ ಪ್ರಕಟಣೆ ನೀಡಿದ ಅವರು, ನಿರುದ್ಯೋಗ ಸಮಸ್ಯೆಯಿಂದ ಯುವ ಪೀಳಿಗೆ ಕಂಗಾಲಾಗಿದೆ. ಸಮಾಜದಲ್ಲಿ ಬಡತನ ಎಲ್ಲೆ ಮೀರಿದೆ. ವಸತಿ, ರಸ್ತೆ, ವಿದ್ಯುತ್, ನೀರು ಸೇರಿ ಹಲವು ಸಮಸ್ಯೆಗಳು ಜನರನ್ನು ಬೆಂಬಿಡದೇ ಕಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನೆಲಕಚ್ಚಿ ಅರಾಜಕತೆ ತಾಂಡವವಾಡುತ್ತಿದೆ. ಈ ಬಗ್ಗೆ ಚರ್ಚೆ ಮಾಡದೇ ಕೇವಲ ಪ್ರಚೋದನಕಾರಿ ಹೇಳಿಕೆ ನೀಡಿ, ಯುವಕರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿರುವ ಮುತಾಲಿಕ್ ಜವಾಬ್ದಾರಿ ಇಲ್ಲದ ನಾಡದ್ರೋಹಿ ಎಂದು ಹುಸೇನ್ ಕಿಡಿ ಕಾರಿದರು.
ಸಮಾಜದ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್ ನನ್ನು ಕೂಡಲೇ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…