ಬಿಸಿ ಬಿಸಿ ಸುದ್ದಿ

ಜನಸ್ನೇಹಿ ಕಾನೂನು ಸುವ್ಯಸ್ಥೆಗೆ ಆದ್ಯತೆ: ನೂತನ ಕಮಿಷನರ್ ಚೇತನ ಆರ್. ಭರವಸೆ

ನಗರದ ಬೇರೆ ಬೇರೆ ಬಡಾವಣೆ ಮತ್ತು ರಸ್ತೆಗಳು ಬೇರೆ ಬೇರೆ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುತ್ತವೆ. ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ಯಾವ ಠಾಣೆಯನ್ನು ಸಂಪರ್ಕಿಸಬೇಕು ಎಂಬ ಗೊಂದಲ ಸಾರ್ವಜನಿಕರನ್ನು ಕಾಡುತ್ತದೆ. ಹೀಗಾಗಿ ಇಷ್ಟರಲ್ಲೇ ಪೊಲೀಸ್ ಠಾಣೆಗಳ ಸರಹದ್ದು ಖಚಿತಪಡಿಸುವ ಬೋರ್ಡ್‍ಗಳನ್ನು ನಗರದ ಎಲ್ಲೆಡೆ ಅಳವಡಿಸಲಾಗುವುದು. -ಚೇತನ್ ಆರ್, ಕಲಬುರಗಿ ನಗರ ಪೊಲೀಸ್ ಕಮಿಷನರ್.

ಕಲಬುರಗಿ: ಪೊಲೀಸ್ ಆಯುಕ್ತಾಲಯದ ವ್ಯಪ್ತಿಯಲ್ಲಿ ಕನೂನು ಸುವ್ಯವಸ್ಥೆ ಪಾಲನೆಗೆ ಮೊದಲ ಆದ್ಯತೆ ನೀಡಲಗುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರ ರಕ್ಷಣೆಗೆ ಜನಶ್ನೇಹಿ ಪೊಲೀಸ್ ವ್ಯವಸ್ಥೆಗಾಗಿ ಸಹಾಯವಾಣಿ 112 ಸಕ್ರಿಯಗೊಳಿಸಲಾಗುವುದು ಎಂದು ನೂತನ ಪೊಲೀಸ್ ಕಮಿಷನರ್ ಚೇತನ ಆರ್. ತಿಳಿಸಿದರು.

ಇಲ್ಲಿನ ಪೊಲೀಸ್ ಕಮಿಷನರ್ ಕಚೇರಿಯ ಸಭಾಂಗಣದಲ್ಲಿ ಶನಿವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರ್ಬಲ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕುವುದಕ್ದಕಾಗಿ ಇಲಾಖೆಯನ್ನು ಸನ್ನದ್ದುಗೊಳಿಸುವುದಾಗಿ ಅವರು ಹೇಳಿದರು.

ಆಯುಕ್ತಾಲಯದ ವ್ಯಾಪ್ತಿಯಲ್ಲಿ ನೈಟ್ ಬೀಟ್ ವ್ಯವಸ್ಥೆ ಮತ್ತಷ್ಟು ಬಲಪಡಿಸಲಾಗುವುದು ಅದರಲ್ಲೂ ಮುಖ್ಯವಾಗಿ ವರ್ತುಲ ರಸ್ತೆ ಮತ್ತು ಹೆಚ್ಚು ಜನಸಂಚಾರ ಇಲ್ಲದ ಪ್ರದೇಶಗಳಲ್ಲಿ ಅಪರಾಧ ಕೃತ್ಯಗಳಿಗೆ ಆಸ್ಪದವಿಲ್ಲದಂತೆ ನೈಟ್ ಬೀಟ್ ಸಕ್ರಿಯಗೊಳಿಸಲಾಗುವುದು ಎಂದರು.

ಬೆಳಗ್ಗೆ 9ರಿಂದ 11 ಮತ್ತು ಸಂಜೆ 5ರಿಂದ 7 ಗಂಟೆಯವರೆಗೆ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಿರುತ್ತದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸಂಚಾರ ವ್ಯವಸ್ಥೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅತ್ಯಧಿಕ ಭಾರದ ಮರಳು ಗಾಡಿಗಳು ಓಡಾಡುವುದರಿಂದ ರಸ್ತೆ ಹದಗೆಡುತ್ತಿವೆ ಎಂಬ ಮಾಧ್ಯನದವರ ಸಲಹೆ ಮೇಋಎಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಪೊಲೀಸ್ ಇಲಾಖೆಯ ಸಿಬ್ಬಂದಿ ಸಮಾಜಘಾತುಕ ಶಕ್ತಿಗಳೊಂದಿಗೆ ಶಾಮೀಲಾಗಿರುವುದು ಕಂಡು ಬಂದರೆ ಅಂಥವರ ವಿರುದ್ಧ ಶುಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರು ಪ್ರಕರಣಕ್ಕೆ ಸಂಭಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು. ಡಿಸಿಪಿ ಅಡ್ಡೂರ್ ಶ್ರೀನಿವಾಸಲು ಇದ್ದರು.

ಪಾರ್ಕಿಂಗ್ ವ್ಯವಸ್ಥೆ ಆಟೋ ಚಾಲಕರೊಂದಿಗೆ ಸಭೆ: ಕಲಬುರಗಿ ನಗರದಲ್ಲಿ ಆಟೋ ಚಾಲಕರು ಎಲ್ಲಂದರಲ್ಲಿ ಆಟೋರಿಕ್ಷಾ ನಿಲ್ಲಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಸಾಕಷ್ಟು ಬಂದಿವೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಧಿಕೃತ ಪಾರ್ಕಿಂಗ್ ಸ್ಥಳದಲ್ಲಿಯೇ ಪಾರ್ಕ್ ಮಡುವಂತೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಆಟೋ ಚಾಲಕರ ಸಭೆ ಕರೆದು ಅವರೊಂದಿಗೆ ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಲಾಗುವುದು ಎಂದು ಕಮಿಷನರ್ ಚೇತನ್ ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago