ಕಲಬುರಗಿ: ಜಿಲ್ಲೆಯ ನಾಗೇನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದ ಸಿಬ್ಬಂದಿ ಬಸಪ್ಪ ಆಶಪ್ಪ ಕುಂಬಾರ ಅವರಿಗೆ ಪೊಲೀಸ್ ತರಬೇತಿಯಲ್ಲಿ ತೋರಿದ ಪರಿಣಾಮಕಾರಿ ಮತ್ತು ದಕ್ಷತೆಗಾಗಿ ಕೇಂದ್ರ ಗೃಹ ಸಚಿವರ ಪದಕ(ಯೂನಿಯನ್ ಹೋಂ ಮಿನಿಸ್ಟರ್ಸ್ ಮೇಡಲ್ ಫಾರ್ ಎಕ್ಸಲೆನ್ಸ್ ಇನ್ ಪೊಲೀಸ್ ಟ್ರೇನಿಂಗ್)ಕ್ಕೆ ಪಾತ್ರರಾಗಿದ್ದಾರೆ.
ಭಾರತ ಸರಕಾರದ ಗೃಹ ಸಚಿವಾಲಯದ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ 2021-22ನೇ ಸಾಲಿಗೆ ಕೇಂದ್ರ ಗೃಹ ಸಚಿವರ ಪದಕಕ್ಕೆ ಪಾತ್ರರಾಗಿದ್ದಾರೆ. ಬಸಪ್ಪ ಆಶಪ್ಪ ಕುಂಬಾರ ಸೇರಿದಂತೆ ಕರ್ನಾಟಕದ 10ಜನರು ಈ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಬಸಪ್ಪ ಸೇರಿದಂತೆ ಕೇಂದ್ರ ಗೃಹ ಸಚಿವರ ಪದಕಕ್ಕೆ ಭಾಜನರಾಗಿರುವ ಎಲ್ಲರಿಗೂ ಅಭಿನಂದನೆಗಳು ಸಲ್ಲಿಸಿರುವ ಭಾರತ ಸರಕಾರದ ಗೃಹ ಸಚಿವಾಲಯದ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಬಾಲಾಜಿ ಶ್ರೀವಾತ್ಸವ್ ಅವರು ಇನ್ಮುಂದೆಯೂ ಪೊಲೀಸ್ ಪಡೆಗಳಿಗೆ ಸುಧಾರಿತ ಮತ್ತು ಗುಣಮಟ್ಟದ ಪರಿಣಾಮಕಾರಿಯಾದ ತರಬೇತಿ ನೀಡುವುದರ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಅವರು ಹೇಳಿದ್ದಾರೆ.
ಬಸಪ್ಪ ಆಶಪ್ಪ ಕುಂಬಾರ ಅವರಿಗೆ ಕೇಂದ್ರ ಗೃಹ ಸಚಿವರ ಪದಕ ಲಭಿಸಿರುವುದಕ್ಕೆ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಪೊಲೀಸ್ ಅಧೀಕ್ಷಕರು ಹಾಗೂ ಪ್ರಾಂಶುಪಾಲರಾದ ಡಾ.ಅರುಣ್ .ಕೆ. ಹಾಗೂ ಈ ಹಿಂದಿನ ಪೊಲೀಸ್ ತರಬೇತಿ ಕೇಂದ್ರದ ಪೊಲೀಸ್ ಅಧೀಕ್ಷಕರು ಹಾಗೂ ಪ್ರಾಂಶುಪಾಲರಾಗಿದ್ದ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಇಡಾ ಮಾರ್ಟಿನ್ ಮಾರ್ಬನಿಂಗ್,ಅಧಿಕಾರಿಗಳು ಮತ್ತು ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…