ಕಲಬುರಗಿ; ಕಳೆದ ಒಂದು ವರ್ಷದಲ್ಲಿ ಕಲಬುರಗಿ ಜಿಲ್ಲೆ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದ ಎಸ್‍ಡಿಪಿಐ ಪಕ್ಷದ ಸಂಭವನೀಯ ಅಭ್ಯರ್ಥಿಯಾಗಿದ್ದ ಹಾಗೂ ರಾಜ್ಯ ಸಮಿತಿಯ ಸದಸ್ಯರಾಗಿದ್ದ ಮಹಿಬೂಬ ಐ ಮುಲ್ಲಾ ಬಳಬಟ್ಟಿ ಎಸ್‍ಡಿಪಿಐ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಜೂನ್ ತಿಂಗಳಲ್ಲಿ ನಡೆದ ಬೃಹತ್ ಜನಾಧಿಕಾರ ಸಮಾವೇಶದ ಸಮಯದಲ್ಲಿ ನಗರಾದ್ಯಂತ ಬ್ಯಾನರ್ ಮತ್ತು ಕಟ್ಟೋಟುಗಳನ್ನೂ ಹಾಕಿಸಿ ಹೊಸ ಸಂಚಲನಕ್ಕೆ ಕಾರಣರಾಗಿದ್ದರು. ಹಠಾತ್ ಆಗಿ ಎಸ್‍ಡಿಪಿಐ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು ಹಲವು ಊಹಾಪೆÇೀಹಗಳಿಗೆ ಕಾರಣವಾಗಿದೆ. ಸದ್ಯಕ್ಕೆ ಅವರು ವಯಕ್ತಿಕ ಕಾರಣಗಳಿಂದಾಗಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಅಂತ ಮಾದ್ಯಮಕ್ಕೆ ತಿಳಿಸಿದ್ದಾರೆ. ಆದರೆ ವಿಧಾನಸಭೆ ಚುನಾವಣೆ ಸಮೀಪದಲ್ಲಿ ಆದ ಈ ನಿರ್ಧಾರವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಮಹಿಬೂಬ ಐ ಮುಲ್ಲಾ ಬಳಬಟ್ಟಿ ಯವರು ಮೂಲತಃ ಯಡ್ರಾಮಿ ತಾಲೂಕು ಬಳಬಟ್ಟಿ ಮೂಲದವರಾಗಿದ್ದು, ಕರ್ನಾಟಕ ಸೌಹಾರ್ದ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷರು ಮತ್ತು ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ತಮ್ಮದೇ ಆದಂತಹ ಸಂಘಟನೆ ಮತ್ತು ಜನ ಬೆಂಬಲ ಹೊಂದಿದ್ದಾರೆ. ಅವರ ಮುಂದಿನ ನಡೆಯನ್ನು ಕಾದು ನೋಡಬೇಕಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…