ಬಿಸಿ ಬಿಸಿ ಸುದ್ದಿ

ಸರ್ವರಿಗೂ ಲೇಸನ್ನು ಬಯಸುವ ಲಿಂಗಾಯತ ಧರ್ಮ ವಿಶ್ವಮಾನ್ಯ

ಕಲಬುರಗಿ: ಜಾತಿ, ವರ್ಗ, ವರ್ಣದ ಶ್ರೇಣಿಕೃತ ಪದ್ಧತಿಗಳಿಂದ ಶತಮಾನಗಳಿಂದಲೂ ಶೋಷಣೆಗೆ ಒಳಗಾಗಿ, ಮೂಕ ರೋಧನೆಯನ್ನು ಅನುಭವಿಸುತ್ತಿದ್ದ ದೀನ, ದಲಿತರು, ಶೋಷಿತರು, ಮಹಿಳೆಯರು, ನಿರ್ಗತಿಕರಿಗೆ ಧ್ವನಿಯಾಗಿ, ಸರ್ವರಿಗೂ ಸಮಾನ ಅವಕಾಶಗಳನ್ನು ಒದಗಿಸಿಕೊಟ್ಟ ವಿಶ್ವಗುರು ಬಸವಣ್ಣನವರಿಂದ ಸ್ಥಾಪಿತವಾದ, ಜಗತ್ತಿನ ಸಕಲ ಜೀವರಾಶಿಗಳಿಗೆ ಲೇಸನ್ನು ಬಯಸುವ ಲಿಂಗಾಯತ ಧರ್ಮ ವಿಶ್ವಮಾನ್ಯವಾಗಿದೆ ಎಂದು ಅಕ್ಕ ಮಹಾದೇವಿ ಆಶ್ರಮದ ಪೂಜ್ಯ ಪ್ರಭುಶ್ರೀ ತಾಯಿ ಅಭಿಮತಪಟ್ಟರು.

ನಗರದ ಬಿದ್ದಾಪುರ ಕಾಲನಿಯಲ್ಲಿರುವ ಆಶ್ರಮದ ಆವರಣದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ‘868ನೇ ಲಿಂಗಾಯತ ಧರ್ಮ ಸಂಸ್ಥಾಪನಾ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡುತ್ತಿದ್ದರು.

ಬಸವಣ್ಣನವರು ಎಲ್ಲಾ ಕಾಯಕ ಶರಣರನ್ನು ಒಳಗೊಂಡ ಸಮಾನತೆ, ವೈಜ್ಞಾನಿಕ ತಳಹದಿಯ ಮೇಲೆ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ್ದಾರೆ. ‘ವಿಶ್ವದ ಪ್ರಥಮ ಸಂಸತ್ತು’ ಎಂದು ಕರೆಯಲ್ಪಡುವ ‘ಅನುಭವ ಮಂಟಪ’ದ ಮೂಲಕ ಸರ್ವರಿಗೂ ಸಮಾನ ಅವಕಾಶವನ್ನು ನೀಡಿದ್ದಾರೆ. ಇಡೀ ವಿಶ್ವದಲ್ಲಿಯೇ ಕಾಯಕದ ಮಹತ್ವವನ್ನು ಪ್ರಥಮ ಬಾರಿಗೆ ಹೇಳಿ, ಅದನ್ನು ಆಚರಿಸಿ ತೋರಿಸಿದ ಕೀರ್ತಿ ಬಸವಾದಿ ಶರಣರು ಮತ್ತು ಲಿಂಗಾಯತ ಧರ್ಮಕ್ಕೆ ಸಲ್ಲುಸತ್ತದೆ. ವಿಶೇಷವಾಗಿ ಮಹಿಳಾ ಸಮಾನತೆಗೆ ಬಸವಾದಿ ಶರಣರು ನೀಡಿದ ಕೊಡುಗೆ ಮರೆಯುವಂತಿಲ್ಲ. ಧರ್ಮ ಬೋಧನೆಯ ಜೊತೆಗೆ ಅವುಗಳ ಆಚರಣೆಗಳು ಅಗತ್ಯವಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ ಮಾತನಾಡಿ, ಲಿಂಗಾಯತ ಧರ್ಮಿಯರು ಸಮಾನತೆಯ ಸಂಕೇತವಾದ ಇಷ್ಟಲಿಂಗ, ವಿಭೂತಿ, ರುದ್ರಾಕ್ಷಿ ಧರಿಸಬೇಕು. ಆತ್ಮದಲ್ಲಿರುವ ಪರಮಾತ್ಮನನ್ನು ಕಾಣಲು ಇಷ್ಟಲಿಂಗವು ಒಂದು ಸಾಧನವಾಗಿದೆ. ಶರಣರು ರಚಿಸಿದ ವಚನಗಳನ್ನು ಅಧ್ಯಯನ ಮಾಡಿ, ಅವುಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಜಾತಿಯತೆ, ಶೋಷಣೆ, ಗೊಡ್ಡು ಸಂಪ್ರದಾಯ, ಮೌಢ್ಯತೆ, ಕಂದಾಚಾರಗಳಿಂದ ದೂರವಿರಬೇಕು. ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಗಿ ಈಗಾಗಲೇ 868 ವರ್ಷಗಳಾಗಿದ್ದು, ಅದಕ್ಕೆ ಈಗ ಕಾನೂನಾತ್ಮಕ ಮಾನ್ಯತೆಗಾಗಿ ಹೋರಾಟ ಜರುಗುತ್ತಿದೆ. ಅದು ಖಂಡಿತವಾಗಿಯೂ ದೊರೆಯುತ್ತದೆ ಎಂದು ಇದೇ ಸಂದರ್ಭದಲ್ಲಿ ತಮ್ಮ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಬಿ.ಪಾಟೀಲ, ಶಿವಯೋಗಪ್ಪ ಬಿರಾದಾರ, ಜಗದೀಶ ಪಾಟೀಲ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಸಿದ್ದಾರೂಡ ಬಿರಾದಾರ, ನಾಗಭೂಷಣ ಅಗಸ್ಥ್ಯತೀರ್ಥ, ಶರಣಗೌಡ ಪಾಟೀಲ, ಭೀಮಾಶಂಕರ ಬಾಬಾ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago