ಬೆಂಗಳೂರು: ರೈತರ ಸಮಗ್ರ ಸಬಲೀಕರಣಕ್ಕಾಗಿ ಪಂಚರತ್ನ ಯೋಜನೆಗಳಲ್ಲಿ ʼರೈತ ಚೈತನ್ಯʼ ಕಾರ್ಯಕ್ರಮ ರೂಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಜ.16) ಕೃಷಿ ಸಮಸ್ಯೆಗಳ ಬಗ್ಗೆ ರೈತರ ಜತೆ ಮುಕ್ತವಾಗಿ ಚರ್ಚಿಸಲು ʼರೈತ ಸಂಕ್ರಾಂತಿ’ ಎಂಬ ಅನ್ಲೈನ್ ಸಂವಾದ ಹಮ್ಮಿಕೊಂಡಿದ್ದಾರೆ.
ಈ ಸಂವಾದದಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಸಂದೇಶ ನೀಡಲಿದ್ದು, ಚರ್ಚೆಯನ್ನು ಅವರೂ ಆಲಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳು; ಕಳೆದ 45 ದಿನಗಳಿಂದ ನಾನು ರಾಜ್ಯದ ಉದ್ದಗಲಕ್ಕೂ ಪಂಚರತ್ನ ರಥಯಾತ್ರೆ ನಡೆಸಿದ್ದೇನೆ. ಎಲ್ಲೆಡೆ ರೈತರು ಸಂಕಷ್ಟದಲ್ಲಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದಾಗ 2006 ಮತ್ತು 2018ರಲ್ಲಿ ಎರಡು ಬಾರಿ ಸಾಲಮನ್ನಾ ಮಾಡಿದ್ದೆ. ಆದರೂ ರೈತರ ಸಮಸ್ಯೆಗಳು ನಿವಾರಣೆ ಆಗಿಲ್ಲ. ಕೆಲ ದಿನಗಳಿಂದ ಈಚೆಗೆ ಮತ್ತೆ ರೈತರು ಜೀವ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಅನ್ನದಾತರು ಜೀವ ಕಳೆದುಕೊಳ್ಳುತ್ತಿರುವುದು ನನಗೆ ಅತೀವ ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ರೈತರು ಶಾಶ್ವತವಾಗಿ ಸಾಲಗಾರರಾಗದಂತೆ ಮಾಡುವುದು ಹಾಗೂ ಅವರಿಗೆ ಆರ್ಥಿಕ ಚೈತನ್ಯ ಕಲ್ಪಸುವ ಉದ್ದೇಶದಿಂದ ರೂಪಿಸಿರುವ ʼರೈತ ಚೈತನ್ಯʼ ಕಾರ್ಯಕ್ರಮದ ಬಗ್ಗೆ ಅನ್ನದಾತರಿಗೆ ಈ ಸಂವಾದದಲ್ಲಿ ಮನವರಿಕೆ ಮಾಡಿಕೊಡುತ್ತೇನೆ. ಕೃಷಿ ಸಮಸ್ಯೆಗಳ ಬಗ್ಗೆ ಇನ್ನಷ್ಟು ಪರಿಣಾಮಕಾರಿಯಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾನು ರೈತರ ಜತೆ ಸಂವಾದ ನಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಬಿಡದಿಯ ನನ್ನ ತೋಟದಲ್ಲಿ ʼರೈತ ಸಂಕ್ರಾಂತಿʼ ಸಂವಾದ ಹಮ್ಮಿಕೊಳ್ಳಲಾಗಿದೆ. ಅಹರಾಹ್ನ 3.30ರಿಂದ ಸಂಜೆ ೫ ಗಂಟೆವರೆಗೂ ರೈತರ ಜತೆ ಸಂವಾದ ನಡೆಸುತ್ತೇನೆ. ಸುಮಾರು 50ಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳ ರೈತರ ಜತೆ ನಾನು ಅನ್ಲೈನ್ ವೇದಿಕೆ ಮೂಲಕ ನೇರ ಸಂವಾದ ನಡೆಸುತ್ತೇನೆ. ಆದರೆ, ಯಾವುದೇ ಭಾಗದ ರೈತರು ಈ ಸಂವಾದದಲ್ಲಿ ಭಾಗಿಯಾಗಬಹುದು ಹಾಗೂ ಸಮಸ್ಯೆಗಳು, ಪರಿಹಾರಗಳನ್ನು ತಿಳಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…