ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಮತ್ತು ಕೇಂದ್ರಿಯ ಹಿಂದಿ ಸಂಸ್ಥಾನ, ಆಗ್ರಾ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ “ಒಂದು ದಿನದ ರಾಷ್ಟೀಯ ವಿಚಾರ ಸಂಕಿರಣ”ವನ್ನು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಶರಣಬಸ್ಸಪ್ಪಾ ಹರವಾಳ ಅವರ ಅಧ್ಯಕ್ಷತೆಯಲ್ಲಿ ಪ್ರೊ. ದಿಲೀಪ ಮೆಹೆರಾ, ಸರ್ದಾರ ಪಟೇಲ ವಿಶ್ವವಿದ್ಯಾಲಯ, ಆನಂದ (ಗುಜರಾತ) ವಿಚಾರ ಸಂಕಿರಣವನ್ನು ಸಸಿಗೆ ನೀರೆರುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದರು.
ವೇದಿಕೆಯ ಮೇಲೆ ಸಂಸ್ಥೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಚಾಲಕರಾದ ಸೋಮನಾಥ ನಿಗ್ಗುಡಗಿ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರದ ಹಿಂದಿ ವಿಭಾಗದ ಮುಖ್ಯಸ್ಥರಾದ ಪ್ರೊ. ನಾಮದೇವ ಗೌಡ, ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ, ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ ಪರೂತೆ, ಡಾ. ಪ್ರೇಮಚಂದ ಚವ್ಹಾಣ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕುಮಾರಿ. ಅಶ್ವಿನಿ, ಬಿ.ಕಾಂ ಪ್ರಥಮ ಸೆಮೆಸ್ಟರ್‌ನ ವಿದ್ಯಾರ್ಥಿನಿಯ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಸಂಗೀತ ವಿಭಾಗದ ಮುಖ್ಯಸ್ಥರಾದ ಡಾ. ರೇಣುಕಾ ಹಾಗರಗುಂಡಗಿ ಹಾಗೂ ಸಹಾಯಕ ಪ್ರಾಧ್ಯಪಕರಾದ ಡಾ. ಮುಖಿಮಿಯಾ ಸಾಥ ನೀಡಿದರು.
ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ವಿಚಾರ ಸಂಕಿರಣದಲ್ಲಿ ಪಾಲ್ಗೋಂಡ ಎಲ್ಲರನ್ನು ಸ್ವಾಗತಿಸಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ ಪರೂತೆ ಉದ್ಘಾಟನಾ ಸಮಾರಂಭದ ವೇದಿಕೆಯ ಮೇಲೆ ಆಸೀನರಾದ ಗಣ್ಯಮಾನ್ಯರನ್ನು ಪರಿಚಯಿಸಿದರು. ಡಾ. ಪ್ರೇಮಚಂದ ಚವ್ಹಾಣ ವಿಚಾರ ಸಂಕಿರಣದ ಕುರಿತಾಗಿ ಪ್ರಾಸ್ತಾವಿಕ ನುಡಿಗಳಾಡಿದರು.
ಕಾರ್ಯಕ್ರಮದಲ್ಲಿ ಸುವiರು ೧೦೦ ಸಂಶೋಧನಾ ಲೇಖನಗಳ ಪ್ರಕ್ರಿಯೆಗಳ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ದೇಶದ ವಿವಿಧ ವಿಶ್ವವಿದ್ಯಾಲಯ ಹಾಗೂ ಮಹಾವಿದ್ಯಾಲಯಗಳಿಂದ ಆಗಮಿಸಿದ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು, ಮಹಾವಿದ್ಯಾಲಯದ ಹಿಂದಿ ವಿಭಾಗದ ಉಪನ್ಯಾಸಕಿಯರಾದ. ಸುಷ್ಮಾ ಕುಲಕರ್ಣಿ,. ಕವಿತಾ ಠಾಕೂರ, ಬೋಧಕ, ಭೋದಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮಹಾವಿದ್ಯಾಲಯದ ಬಿ.ಕಾಂ ಪ್ರಥಮ ಸೆಮೆಸ್ಟರ ವಿದ್ಯಾರ್ಥಿನಿಯಾದ ಕುಮಾರಿ. ಮುಕ್ತಿ ನಾಯಕ ಕಾರ್ಯಕ್ರಮದಲ್ಲಿ ಪಾಲ್ಗೋಂಡ ಎಲ್ಲರನ್ನು ವಂದಿಸಿದರು.
ಡಾ. ವಿಲಾಸ ಸಾಳೋಂಕೆ, ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ ಯಶಸ್ವಿಗೊಳಿಸಿದರು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ ಪತ್ತಾರ ಇದ್ದರು.