ದೇಶದ ಸಮಗ್ರ ಅಭಿವೃದ್ಧಿಗೆ ಯುವಜನರ ಕೊಡುಗೆಗಳು ನೀಡಲಿ: ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್

0
7
ಬೆಂಗಳೂರು: ಭಾರತವು ಯುವ ಜನರ ದೇಶವಾಗಿದೆ.ದೇಶದ ಸಮಗ್ರ ವಿಕಾಸಕ್ಕೆ ಯುವಕರು ತಮ್ಮ ಕೊಡುಗೆಗಳನ್ನು ನೀಡುವ ಮೂಲಕ ಭಾರತ ಮಾತೆಯ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹೇಳಿದರು.
ಭಾರತ ಸರ್ಕಾರದ ಯುವ ವ್ಯವಹಾರಗಳ ಹಾಗೂ ಕ್ರೀಡಾ ಮಂತ್ರಾಲಯ, ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.
ಉತ್ಸಾಹ ಮತ್ತು ಕ್ರಿಯಾಶೀಲತೆಯಿಂದ ಭಾಗವಹಿಸಿದ ಯುವಜನತೆ ಭಾರತದ ಏಕತೆಯನ್ನು ಪ್ರತಿಬಿಂಬಿಸಿದೆ. ಭಾರತದ ಸಂಸ್ಕøತಿಗೆ ಪ್ರಾಚೀನತೆಯಿದೆ. ವಸುಧೈವ ಕುಟುಂಬಕಂ ಧ್ಯೇಯದೊಂದಿಗೆ ದೇಶ ಮುನ್ನಡೆಯುತ್ತಿದೆ. ಶಿಕ್ಷಣ ಮತ್ತು ಕೌಶಲ್ಯಕ್ಕೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಆದ್ಯತೆ ನೀಡಿದೆ. ಮಾತೃಭಾμÉಯ ಕಲಿಕೆಯೊಂದಿದೆ ಐಚ್ಛಿಕ ಭಾμÉಗಳ ಕಲಿಕೆಗೂ ನೀತಿ ಅವಕಾಶ ನೀಡಿದೆ. ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಯೋಗ ಮತ್ತು ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗವಾಗಿವೆ. ಮನುಷ್ಯ ಜೀವನದ ಅವಕಾಶ ದೊರೆತಿದೆ. ಇದು ಶ್ರೇಷ್ಟ ಅವಕಾಶ ಇದರ ಸದ್ಬಳಕೆ ಸಮರ್ಪಣಾ ಭಾವದೊಂದಿಗೆ ಪೂರ್ಣವಾಗಬೇಕು.
ದೇಶದ ವಿಕಾಸಕ್ಕೆ ಯುವಜನರು ತಮ್ಮ ಕೊಡುಗೆಗಳನ್ನು ನೀಡಬೇಕು. ಭಾರತ ಸರ್ಕಾರವು ನೀಡಿದ ರಾಷ್ಟ್ರೀಯ ಯುವಜನೋತ್ಸವ ಅವಕಾಶವನ್ನು ರಾಜ್ಯಕ್ಕೆ ನೀಡಿತ್ತು. ರಾಜ್ಯ ಅತ್ಯಂತ ಸಮರ್ಥವಾಗಿ ಅದನ್ನು ನಿರ್ವಹಿಸಿದೆ. ದೇಶದ ಮೂಲೆ ಮೂಲೆಗಳಿಂದ ಆಗಮಿಸಿರುವ ಯುವಜನ ಇಲ್ಲಿಂದ ಸಿಹಿ ನೆನಪುಗಳನ್ನು ತಮ್ಮೊಂದಿಗೆ ಕೊಂಡೊಯ್ಯಲಿ. ದೇಶವು ಯುವಜನರದ್ದಾಗಿದೆ. ಯುವಜನರು ಭಾರತದ ಭವಿಷ್ಯವಾಗಿದ್ದಾರೆ. ಭಾರತ ಮಾತೆಯ ಉಜ್ವಲ ಭವಿಷ್ಯಕ್ಕೆ ಯುವಜನರು ತಮ್ಮ ಕೊಡುಗೆಗಳನ್ನು ನೀಡಬೇಕು ಎಂದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ, ಕೇಂದ್ರ ಯುವ ವ್ಯವಹಾರಗಳು, ಕ್ರೀಡಾ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ, ಗಣಿ, ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ರಾಜ್ಯ ಜಂಗಲ್ ರೆಸಾರ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜು ಕೋಟೆಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here