ಬಿಸಿ ಬಿಸಿ ಸುದ್ದಿ

ಶರಣ ಸಂಬಂಧವನರಿದ ಬಳಿಕ ಮರಳಿ ಭವಿಯ ಬೆರಸಬಾರದು

ಕಲಬುರಗಿ: ಕೂಡಲಸಂಗಮದೇವಾ ಎಂದು ಬಸವಣ್ಣನವರು ಆಗಲೇ ಕಾನೂನಿನ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ ಎಂದು ನ್ಯಾಯವಾದಿ ಗಣಪತರಾವ ಅಂಕಲಗಿ ಹೇಳಿದರು.

ನಗರದ ಭವಾನಿ ನಗರದಲ್ಲಿರುವ ಬಬಲಾದ ಮಠದಲ್ಲಿ 141ನೇ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ “ಜನಸಾಮಾನ್ಯರಿಗಾಗಿ ಕಾನೂನು ಅರಿವು” ಕಾರ್ಯಕ್ರಮದ ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಾ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡಿ ಹಾಗೂ ಭ್ರೂಣ ಹತ್ಯೆ, ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ  ಶರಣರು ಅರಿವು ಮೂಡಿಸುವ ಮೂಲ ಕ ಜನಜಾಗೃತಿ ಮಾಡಿದ್ದಾರೆ.

ಶರಣರು ತಮ್ಮ ವಚನದಲ್ಲಿ ಎಲ್ಲಾ ಕಾನೂನುಗಳು ಅಳವಡಿಸಿ ಉತ್ತಮ ಸಮಾಜ ನಿರ್ಮಿಸಲು ಪ್ರಯತ್ನಿಸಿದ್ದಾರೆ. ಅಂತಹ ವಚನಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮೃದ್ಧ, ಶಾಂತಿಯ ಸಮಾಜ ನಿರ್ಮಿಸೋಣ ಎಂದು ಮಾರ್ಮಿಕವಾಗಿ ನುಡಿದರು. ಇದೆ ಸಂದರ್ಭದಲ್ಲಿ ಜನಪದ ಕಲಾವಿದ ರಾಜು ಹೆಬ್ಬಾಳ ಜನಪದ ಗೀತೆಗಳಾದ ಸೋಬಾನ ಪದ, ಬೀಸುವ, ಕುಟ್ಟುವ, ಹಂತಿ ಪದವನ್ನು ಹಾಡುವ ಮೂಲಕ ಜನರನ್ನು ರಂಜಿಸಿದರು. ಪ್ರಾಸ್ತಾವಿಕವಾಗಿ ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡುತ್ತಾ

ಕಬ್ಬಿಣ ಎಷ್ಟೇ ಬಿರುಸು ಹಾಗೂ ಗಟ್ಟಿಯಾಗಿದ್ದರೂ ತನ್ನ ತುಕ್ಕಿನಿಂದಲೇ ದುರ್ಬಲವಾಗುತ್ತದೆ. ನಾವು ಎಷ್ಟೇ ಸಧೃಡರಾಗಿದ್ದರೂ ನಮ್ಮ ದೌರ್ಬಲ್ಯಗಳಿಂದ ದುರ್ಬಲರಾಗುತ್ತೇವೆ. ನಮ್ಮ ಬಲಹೀನತೆಗಳನ್ನು ಗೆಲ್ಲಬೇಕು, ದೌರ್ಬಲ್ಯವನ್ನು ಮೆಟ್ಟಿ ನಿಲ್ಲಬೇಕು ಎಂದು ಹೇಳಿದರು.

ಗುರುರಾಜ ಹಸರಗುಂಡಿಗಿ,  ಮಲ್ಲಿಕಾರ್ಜುನ ಹುಮನಾಬಾದ, ವೀರಯ್ಯಸ್ವಾಮಿ, ಮಾಣಿಕ ಗುತ್ತೇದಾರ, ತೇಜಸ್ವಿನಿ ಘನಾತೆ ಸೇರಿದಂತೆ ಅನೇಕ ಜನರು ಉಪಸ್ಥಿತರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

7 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago