ಬಿಸಿ ಬಿಸಿ ಸುದ್ದಿ

ಜನವರಿ ಮಾಸಾಂತ್ಯಕ್ಕೆ `ಮಕ್ಕಳ ಸಾಹಿತ್ಯ-ಸಾಂಸ್ಕøತಿಕ ಸಮಾವೇಶ

ಕಲಬುರಗಿ: ಹೊಸ ಪೀಳಿಗೆಗೆ ಹೊಸ ವಿಚಾರಗಳನ್ನು ಮುಟ್ಟಿಸುವ ಮತ್ತು ಮಕ್ಕಳ ಪ್ರತಿಭಾ ಅನಾವರಣಕ್ಕೆ ಅವಕಾಶ ಕೊಡುವ ಉದ್ದೇಶದಿಂದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜನವರಿ ಮಾಸಾಂತ್ಯದಲ್ಲಿ ಒಂದು ದಿನದ `ಗಡಿನಾಡು ಉತ್ಸವ ಮತ್ತು ಮಕ್ಕಳ ಸಾಹಿತ್ಯ-ಸಾಂಸ್ಕøತಿಕ ಸಮಾವೇಶ’ ವನ್ನು ಆಯೋಜಿಸಲು ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭವನದಲ್ಲಿ ನಡೆಸಿದ ಸಭೆಯಲ್ಲಿ ನಿರ್ಧರಿಸಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಕಾರ್ಯದರ್ಶಿ ಶಿವರಾಜ ಅಂಡಗಿ ತಿಳಿಸಿದ್ದಾರೆ.

ನಮ್ಮ ಭಾಗದ ಮಕ್ಕಳಲ್ಲಿ ಪ್ರತಿಭೆಗೆ ಬರವಿಲ್ಲ. ಅವರ ಆಸಕ್ತಿಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ನೀಡಿದಾಗ ಮಾತ್ರ ಅವರಲ್ಲಿನ ಪ್ರತಿಭೆ ಹೊರಬರಲು ಸಾಧ್ಯವಾಗುತ್ತದೆ. ಜತೆಗೆ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ಗೌರವ ಕೊಡುವುದರಿಂದ ಅವರಲ್ಲಿನ ಪ್ರತಿಭೆಗೆ ಹೆಚ್ಚಿನ ಸಾಧನೆಗೆ ಪ್ರೇರಣೆ ನೀಡಲು ಇಂಥ ಕಾರ್ಯಕ್ರಮದ ಮೂಲಕ ಕೊಟ್ಟಂತಾಗುತ್ತದೆ.

ಕಲೆ, ಆಸಕ್ತಿಗೆ ವಯಸ್ಸಿನ ನಿರ್ಬಂಧವಿಲ್ಲ. ಆದರೆ ಕಲಿಯಬೇಕು ಎನ್ನುವ ತುಡಿತವೊಂದಿದ್ದರೆ ಸಾಕು ಅದು ಅವರನ್ನು ಯಶಸ್ಸಿನ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ. ಇಂಥ ಅನೇಕ ಮಕ್ಕಳನ್ನು ಸಾಧನೆಯ ಹಾದಿಯಲ್ಲಿ ನಡೆಸಲು ಪೂರಕವಾಗುವಂತೆ ಈ `ಮಕ್ಕಳ ಸಾಹಿತ್ಯ-ಸಾಮಸ್ಕøತಿಕ ಸಮಾವೇಶ’ವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಇಂಥ ಸಮ್ಮೇಳನಗಳು ಏರ್ಪಡಿಸುವುದರಿಂದ ಮಕ್ಕಳ ದೈಹಿಕ, ಮಾನಸಿಕ ವಿಕಸನದ ಜತೆಗೆ ಶೈಕ್ಷಣಿಕ ಪ್ರಗತಿಯೂ ಸಾಧ್ಯವಾಗಲಿದೆ. ಬರೀ ಅಂಕಗಳನ್ನು ಪಡೆದರೆ ಸಾಲದು, ಅದರೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕಾಗಿದೆ. ಜಿಲ್ಲೆಯ ಮಕ್ಕಳಲ್ಲಿ ಸಾಹಿತ್ಯದ ಅರಿವು ಮೂಡಿಸಿದಲ್ಲಿ ಉತ್ತಮ ಸಮಾಜ ನಿರ್ಮಿಸಬಹುದು. ಸಮಾವೇಶದಲ್ಲಿ ಗಡಿಭಾಗದ ವಿವಿಧ ಮಠಾಧೀಶರು, ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago