ಕಲಬುರಗಿ: ಕಲ್ಯಾಣ ಕರ್ನಾಟಕದ ಹಿರಿಯ ಮುತ್ಸದಿ ರಾಜಕಾರಣಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ ಭಾವ ಚಿತ್ರವನ್ನು ವಿರೂಪಗೊಳಿಸಿ ಆರೋಪದಲ್ಲಿ ಚಿತ್ತಾಪುರನ ಬಿಜಿಪಿ ಕಾರ್ಯಕರ್ತನ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ತಾಪುರನ ತಾಲ್ಲೂಕಿನ ನಿವಾಸಿ ಅಶ್ವಥ್ ರಾಠೋಡ್ ಫೋಟೋ ವಿರೂಪಗೊಳಿಸಿ ಆರೋಪಿ. ಡಾ.ಮಲ್ಲಿಕಾರ್ಜುನ್ ಖರ್ಗೆ ಅವರ ಫೋಟೋವನ್ನು ಅವಮಾನ ರೀತಿಯಲ್ಲಿ ಎಡಿಟ್ ಮಾಡಿ ಮಲ್ಲಿಕಾರ್ಜುನ್ ಖರ್ಗೆ ಅವರೇ ನಿಮ್ಮ ಸೋಲಿಗೆ ನಿಮ್ಮ ಸುಪುತ್ರ ಕಾರಣ ಎಂದು ತಲೆ ಬರಹ ಬರೆದು ತನ್ನ ವಾಟ್ಸಪ್ ಸ್ಟೇಸ್ ಇಟ್ಟಿದ್ದ.
ಕರ್ನಾಟಕದ ಹಿರಿಯ ಮುತ್ಸದಿ ರಾಜಕಾರಣಿ ಎಂದು ಕರೆಸಿಕೊಳ್ಳುವ ರಾಷ್ಟ್ರ ಮಟ್ಟದ ಉನ್ನತ ಹುದ್ದೆಯಲ್ಲಿರುವ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಅಪಾರ ಅಭಿಮಾನಿಗಳ ಬಳವನ್ನು ಹೊಂದಿದ್ದಾರೆ. ಬಿಜೆಪಿ ಕಾರ್ಯಕರ್ತನ ಕೃತ್ಯದಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಆರೋಪಿ ಅಶ್ವಥ್ ರಾಠೋಡ್ ವಿರುದ್ಧ ದೂರು ನೀಡಿ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಪಟ್ಟು ಹಿಡಿದಿದ್ದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಕ್ತಾರ ಪಟೇಲ್, ವಿನೋದ ಗುತ್ತೇದಾರ್, ಸೂರ್ಯಕಾಂತ ಪೂಜಾರಿ, ಶ್ರೀಕಾಂತ ಸಿಂಧೆ, ಜಗದೀಶ ಚವ್ಹಾಣ್, ಶಿವಾಜಿ ಕಾಶಿ, ಶಿವಕಾಂತ ಬೆಣ್ಣೂರಕರ್, ಸಂತೋಷ ಪೂಜಾರಿ, ಮಲ್ಲಿಕಾರ್ಜುನ ಬೆಣ್ಣೂರಕರ್, ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…