ಸೇಡಂ: ರೈತ ಪರವಾದ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಜೆಡಿಎಸ್ ಪಕ್ಷದ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ ಹೇಳಿದರು.
ಸೇಡಂ ಪಟ್ಟಣದ ಬ್ರಾಹ್ಮಣ ಗಲಿ ಬಡಾವಣೆಯಲ್ಲಿ ನೂರಾರು ಮಹಿಳೆಯರು ವಿವಿಧ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಮಾಡಿಕೊಂಡು ಮಾತನಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ಜನಪರ ಯೋಜನೆಗಳು ಜೆಡಿಎಸ್ ಪಕ್ಷಕ್ಕೆ ದೊಡ್ಡ ಕೊಡುಗೆಯಾಗಿದೆ. ಮುಂಬರುವ ದಿನಗಳಲ್ಲಿ ಇಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಕೊಡಬೇಕು.
ನೀರಾವರಿ ಯೋಜನೆಗಳು ಅನುಷ್ಠಾನಕ್ಕೆ ತರಬೇಕು. ಮತಕ್ಷೇತ್ರದ ಜನತೆಗೆ ನ್ಯಾಯಯುತವಾಗಿ ಏನು ಸೇರಬೇಕೋ ಅದನ್ನು ಕೊಡಿಸಲು ತಾವು ಸದಾ ಹೋರಾಟಕ್ಕೆ ಸಿದ್ಧರಿರುವುದಾಗಿ ಹೇಳಿದರು.
ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಸ್ತ್ರಿ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ ಆದಕಾರಣ ಪ್ರತಿಯೊಬ್ಬರು ಜೆಡಿಎಸ್ ಪಕ್ಷಕ್ಕೆ ಬೆಂಬಲಿಸುವ ಮೂಲಕ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಮನವಿ ಮಾಡಿದ್ದರು.
ಈ ಸಂದರ್ಭದಲ್ಲಿ ಪಲ್ಲವಿ ಬಾಲರಾಜ್ ಗುತ್ತೇದಾರ, ಅಂಕೀತಕುಮಾರ ಜೋಶಿ, ಶಂಭುಲಿಂಗ ನಾಟೇಕರ್. ಪ್ರವೀಣ ಗುತ್ತೇದಾರ್ ,ರಮೇಶ ನೀಲಂಗಿ, ಅಮೀನರೆಡ್ಡಿ, ಮಹೇಶ ನಿಲಂಗಿ, ಹರೀಶ ರೆಡ್ಡಿ, ಆನಂದ ಜೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…