ಸಾಮೂಹಿಕ ವಿವಾಹಗಳಿಂದ ಸಾಮರಸ್ಯ ಮೂಡಲಿದೆ-ಡಾ:ಚನ್ನಮಲ್ಲಿಕಾರ್ಜುನ ಶಿವಾಚಾರ್ಯ

0
22

ಸುರಪುರ:ತಾಲೂಕಿನ ಲಕ್ಷ್ಮೀಪುರ-ಬಿಜಾಸಪುರ ಮಾರ್ಗ ಮದ್ಯದಲ್ಲಿನ ಶ್ರೀಗಿರಿ ಮಠದ ಆವರಣದಲ್ಲಿ ಬುಧವಾರ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು.

ದಕ್ಷಿಣದ ಶ್ರೀಶೈಲ ಎನಿಸಿರುವ ಮರಡಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಹಾಗೂ ಡಾ:ಚನ್ನಮಲ್ಲಿಕಾರ್ಜುನ ಶಿವಾಚಾರ್ಯರ ಪಟ್ಟಾಧಿಕಾರ ವರ್ಧಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಗುಡ್ಡಾಪುರದ ದಾನಮ್ಮ ದೇವಿ ಪುರಾಣ ಕಾರ್ಯಕ್ರಮದ ಜೊತೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು,ಅದರ ಅಂಗವಾಗಿ ಸಾಮೂಹಿಕ ವಿವಾಹಗಳನ್ನು ನಡೆಸಲಾಯಿತು.

Contact Your\'s Advertisement; 9902492681

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಶ್ರೀಗಿರಿ ಮಠದ ಪೀಠಾಧಿಪತಿ ಡಾ:ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಮಾತನಾಡಿ, ಶ್ರೀಮಠದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದಕ್ಕೆಲ್ಲ ಎಲ್ಲ ಭಕ್ತರು ಹಾಗೂ ಮುಖಂಡರುಗಳ ಸಹಕಾರ ಕಾರಣವಾಗಿದೆ ಎಂದರು.ಅಲ್ಲದೆ ಇಂದು ಸಾಮೂಹಿಕ ವಿವಾಹಗಳನ್ನು ನಡೆಸಲಾಗುತ್ತಿದ್ದು ಇದರಿಂದ ದುಂದು ವೆಚ್ಚ ಕಡಿಮೆಯಾಗಲಿದೆ ಅಲ್ಲದೆ ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಾಗಲಿದೆ.ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀಮಠವು ಇಂದು ಸಾಮೂಹಿಕ ವಿವಾಹಗಳನ್ನು ನಡೆಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಭಗವಹಿಸಿದ್ದರು ಹಾಗೂ ಸಾಮೂಹಿಕ ವಿವಾಹಕ್ಕೆ ತನುಮನ ಧನ ಸೇವೆ ಗೈದ ಮುಖಂಡರಾದ ಶರಣು ನಾಯಕ ಬೈರಿಮಡ್ಡಿ,ಎಪಿಎಮ್‍ಸಿ ಮಾಜಿ ಸದಸ್ಯ ಮಲ್ಲಣ್ಣ ಸಾಹು ಮುಧೋಳ,ಮೌನೇಶ ಹಳಿಸಗರ,ಅಬ್ದುಲ ಗಫೂರ್ ನಗನೂರಿ,ನಾಗೇಶ ಕಾಟಗಿ,ಶಿವರಾಜ ಕಲಕೇರಿ,ಗಂಗಾಧರ ಶಾಸ್ತ್ರಿ,ಮಲ್ಲು ಹೂಗಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here