ಬಿಸಿ ಬಿಸಿ ಸುದ್ದಿ

ಗಣಿತ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ, ಕರ್ನಾಟಕರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಹಾಗೂ ಎನ್.ಪಿ.ಎಸ್. ಪದವಿ ಪೂರ್ವಕಾಲೇಜು ಇವರುಗಳ ಸಂಯುಕ್ತಆಶ್ರಯದಲ್ಲಿ ಶಹಾಬಾದ ರಸ್ತೆಯಲ್ಲಿರುವ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 300 ಪ್ರೌಢ ಶಾಲಾ ಗಣಿತ ಬೋಧಿಸುವ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು.

ಕಾರ್ಯಾಗಾರವನ್ನು ಉಪನಿರ್ದೆಶಕರ ಕಛೇರಿಯ ವಿಷಯ ಪರಿವೀಕ್ಷರಾದ ಕರಬಸಯ್ಯ ಮಠ ಅವರು ಉದ್ಘಾಟಿಸಿ ಮಾತನಾಡಿ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ ವಿಷಯಗಳು ಕಠಿಣವಾಗಿದ್ದು, ಈ ವಿಷಯ ಶಿಕ್ಷಕರಿಗೆ ಹೊಸ ಬೋಧನಾ ತಂತ್ರಗಳು ಹಾಗು ವಿಧಾನಗಳನ್ನು ಪರಿಚಯಿಸಲು ವಾರ್ಷಿಕ ಕನಿಷ್ಠ ಎರಡು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದು ಅಗತ್ಯವಾಗಿದೆ. ಈ ಕೆಲಸವನ್ನು ಇಲಾಖೆಯ ಜೊತೆ ಕೈಗೂಡಿಸಿ ಕರ್ನಾಟಕರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಹಾಗೂ ಎನ್.ಪಿ.ಎಸ್. ಪದವಿ ಪೂರ್ವಕಾಲೇಜು ಕಲಬುರಗಿರವರು ರಾಜ್ಯ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಕಾರ್ಯಾಗಾರ ನಡೆಸುತ್ತಿರುವುದು ಉತ್ತಮಕಾರ್ಯವಾಗಿದೆ ಎಂದರು.

ಸಂಘದ ಅದ್ಯಕ್ಷ ಮಹೇಶ ಹೂಗಾರ ಅವರು ಪ್ರಾಸ್ತವಿಕ ಮಾತನಾಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಮಾಡುವುದು ನಮ್ಮೆಲ್ಲರಜವಾಬ್ದಾರಿ ಇದೆ. ನಾವೆಲ್ಲರೂ ಇದನ್ನು ಸಮರ್ಪಕವಾಗಿ ನಿಭಾಯಿಸಬೇಕು. ಸಂಘ ಎಲ್ಲ ಶೈಕ್ಷಣಿಕ ಚಟುವಟಿಕೆ ಅಭಿವೃದ್ದಿ ಪಡಿಸಲು ಸಹಕರಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸ್ಥೆಯ ಅಧ್ಯಕ್ಷ ಶಶೀಲ ಜಿ. ನಮೋಶಿ ರವರು ಮಾತನಾಡಿ ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಕಾಣಬೇಕಾದರೆ ಶಿಕ್ಷಕರ ಪಾತ್ರತುಂಬಾ ಹಿರಿದಾಗಿದೆ. ಶಿಕ್ಷಕರು ಮನಸ್ಸು ಮಾಡಿದರೆಏನೆಲ್ಲ ಸಾಧನೆಆಗುತ್ತದೆ. ಶಿಕ್ಷಕರಿಂದ ಮಾತ್ರ ಈ ಭಾಗದ ಪ್ರಗತಿ ಸಾದ್ಯಎಂದು ತಿಳಿಸಿದರು.

ಈ ಕಾರ್ಯಾಗಾರದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಅನಿಲಕುಮಾರ ಸ.ಶಿ. ಸರಕಾರಿ ಪ್ರೌಢ ಶಾಲೆ ಅರಳಲುಸಂದ್ರ ತಾ.ಜಿ. ರಾಮನಗರ ಹಾಗೂ ಶಶಿಕಾಂತ ಜೋಶಿ ಸ.ಶಿ. ಸ.ಹಿ.ಪ್ರಾ.ಶಾ. ಔರಾದತಾ. ಜಿ. ಬೀದರರವರು ಭಾಗವಹಿಸಿ ಎಲ್ಲ ಶಿಕ್ಷಕರಿಗೆ ಹೊಸ ವಿಷಯ ಪರಿಚಯಿಸುವುದರೊಂದಿಗೆ ಎಲ್ಲ ಶಿಕ್ಷಕರ ಸಮಸ್ಯೆಗಳಿಗೆ ಉತ್ತಮರೀತಿಯಲ್ಲಿ ಪರಿಹಾರ ನೀಡಿದರು.

ತರಬೇತಿಕಾರ್ಯಾಗಾರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಬಿರಾದಾರ ಅವರು ಮದ್ಯಾಹ್ನದ ವರೆಗೆ ಆಸಕ್ತಿಯಿಂದ ತರಬೇತಿ ವೀಕ್ಷಿಸಿದರು.

ಕಾರ್ಯಕ್ರಮದ ನಿರೂಪಣೆ ಮುರಳಿಧರ ಟೊಣಪೆ ಮಾಡಿದರು, ಕಲ್ಲಹಂಗರಗಾ ಪ್ರೌಢ ಶಾಲೆಯ ಶಿಕ್ಷಕರಾದ ಶ್ರೀನಿವಾಸ ನಾಲವಾರರವರು ಸ್ವಾಗತಿಸಿದರು. ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಮೀಲ್ ಇಮ್ರಾನ್ ಅಹ್ಮದ್, ಸಂಸ್ಥೆಯ ನಿರ್ದೇಶಕರಾದ ವಿಶ್ವನಾಥ ಖುಬಾ ರವರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago