ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ಚಂದ ಗೆಹ್ಲೋಟ್ ಅವರನ್ನು ಬರಮಾಡಿಕೊಂಡರು. ಈ ವೇಳೆಯಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಇದ್ದರು.
ಇಂದು ಮಳಖೇಡದಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ, ಯಾದಗರಿ, ರಾಯಚೂರು ಹಾಗೂ ಮುಂಬೈ ಕರ್ನಾಟಕದ ವಿಜಯಪುರ ಜಿಲ್ಲೆಗಳ 52,072 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದು, ಇದೇ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ಚಂದ ಗೆಹ್ಲೋಟ್ ಸಹ ಭಾಗವಹಿಸಲು ಆಗಮಿಸಿದ್ದಾರೆ.
ದೇಶದ ಇತಿಹಾಸದಲ್ಲಿಯೇ ಐತಿಹಾಸಿಕವಾಗಿ ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ, ಆಡಿ, ಗೊಲ್ಲರಹಟ್ಟಿ, ವಡ್ಡರ ಹಟ್ಟಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಠಿಯಿಂದ ಕಲಬುರಗಿ-27,267, ಬೀದರ-7,500, ರಾಯಚೂರು-3,500, ಯಾದಗಿರಿ-11,200 ಹಾಗೂ ವಿಜಯಪುರ-2,605 ಸೇರಿದಂತೆ ಒಟ್ಟು 52,072 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ. ಇದು ಗಿನ್ನಿಸ್ ದಾಖಲೆಯಾಗಲಿದೆ. ಶತಮಾನದಿಂದ ಸೂರಿನಿಂದ ವಂಚಿತ ಸಮುದಾಯಕ್ಕೆ ಪಕ್ಕಾ ಸೂರು ಕಲ್ಪಿಸುವ ಅಮೃತ ಘಳಿಗೆ ಇದಾಗಿದೆ ಎಂದು ರಾಜ್ಯ ಸರಕಾರ ಬಣಿಸಿದೆ.