ಬಿಸಿ ಬಿಸಿ ಸುದ್ದಿ

ಪತ್ರಕರ್ತರು ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು: ಸಚಿವ ಆರ್. ಅಶೋಕ್

ಬೆಂಗಳೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನ ಮುಂದುವರಿದಂತೆ, ವರದಿಯನ್ನು ಮುಟ್ಟಿಸುವಲ್ಲಿ ವೇಗ ಕಂಡಿದ್ದು, ಅದರಂತೆ ಪತ್ರಿಕಾ ರಂಗದಲ್ಲಿ ಪÀತ್ರಕರ್ತರು ತಮ್ಮ ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕಂದಾಯ ಸಚಿವರಾದ ಆರ್. ಅಶೋಕ್ ತಿಳಿಸಿದರು.

ಅವರು ಇಂದು ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್‍ನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಮ್ಮಿಕೊಂಡಿದ್ದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪ್ರಕರ್ತರಿಗೆ ಟ್ಯಾಬ್ ವಿತರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ 16 ಪತ್ರಕರ್ತರಿಗೆ ಟ್ಯಾಬ್‍ಗಳನ್ನು ವಿತರಣೆ ಮಾಡಿ ಮಾತನಾಡಿದ ಸಚಿವರು, ಮಾಧ್ಯಮದಲ್ಲಿ ಕೆಲಸ ಮಾಡುವವರಿಗೂ ಸವಲತ್ತುಗಳ ಅವಶ್ಯಕತೆ ಇದೆ ಎಂದರು.

ಟ್ಯಾಬ್ ವಿತರಿಸುವುದರ ಜೊತೆಗೆ ಅದನ್ನು ಉಪಯೋಗಿಸುವ ವಿಧಾನ, ಅದರ ವಿಶೇಷತೆ ಮತ್ತು ಅನುಕೂಲದ ಕುರಿತು ತರಬೇತಿ ನೀಡುವ ಅವಶ್ಯಕತೆ ಇದೆ. ಎಲೆಕ್ಟ್ರಾನಿಕ್ ಮಾಧ್ಯಮಕ್ಕೂ, ಮುದ್ರಣ ಮಾಧ್ಯಮಕ್ಕೂ ಬಹಳಷ್ಟು ವ್ಯತ್ಯಾಸವಿದೆ.  ಎಲೆಕ್ಟ್ರಾನಿಕ್ ಮಾದ್ಯಮವು ಬ್ರೇಕಿಂಗ್ ನ್ಯೂಸ್ ನೀಡುವ ಆತುರದಲ್ಲಿ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ತಕ್ಷಣವೇ ಪ್ರಸಾರ ಮಾಡುತ್ತಿವೆ, ಆದರೆ ಮುದ್ರಣ ಮಾದ್ಯಮಗಳು ಪರಿಶೀಲಿಸಿ ಸುದ್ದಿ ನೀಡುತ್ತಾರೆ ಎಂದರು.

ದಿನನಿತ್ಯ ಎರಡು ಪತ್ರಿಕೆಯನ್ನು ಓದುವ ಅಭ್ಯಾಸವನ್ನು ನಾನು ಬೆಳೆಸಿಕೊಂಡಿದ್ದೇನೆ. ಅದರಂತೆ ಪ್ರತಿಯೊಬ್ಬರು ಪತ್ರಿಕೆಯನ್ನು ಓದುವುದರಿಂದ ಪತ್ರಿಕಾ ರಂಗ ಬೆಳೆಯಲು ಸಹಾಯಕವಾಗಲಿದೆ. ಮಾದ್ಯಮದ ಕುಂಟುಂಬದವರಿಗೂ ಹಾಗೂ ಬರವಣಿಗೆಗೆ ಏನೇನು ಅವಶ್ಯಕತೆ ಇದೆಯೋ ಅದನ್ನು ಮಾಡಲು ಪ್ರ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದ ಸಚಿವರು, ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ಮನೆಬಾಗಿಲಿಗೆ ತಲುಪುವಂತೆ ಪಿಂಚಣಿ ಸೌಲಭ್ಯ ಕಲ್ಪಿಸಲಾಗಿದೆ. ಏಳು ದಿನಗಳಲ್ಲಿ ಭೂ ಪರಿವರ್ತನೆ ಮಾಡಲಾಗುತ್ತಿದ್ದು, ಕಾಫಿ ಬೆಳೆಗಾರರಿಗೆ 1 ಲಕ್ಷ ಎಕರೆ  ಹಾಗೂ  ಬಡ ರೈತರಿಗೆ 1.50 ಲಕ್ಷ ಎಕರೆ ಜಮೀನು ನೀಡಲಾಗಿದೆ. 75 ಲಂಬಾಣಿ ತಾಂಡ ವಾಸವಿರುವ ಜಮೀನನ್ನು ನೊಂದಣಿ ಮಾಡಿಕೊಡಲಾಗಿದ್ದು, ಹಲವಾರು ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಕಂದಾಯ ಇಲಾಖೆಯನ್ನು ಬಲವರ್ಧನೆ ಮಾಡಲಾಗಿದೆ ಎಂದು ತಿಳಿಸಿದರು.

ಮಾಧ್ಯಮ ಮತ್ತು ಸರ್ಕಾರ ಜನರ ಪರವಾಗಿ ಕೆಲಸ ಮಾಡಿದಾಗ ಜನರಲ್ಲಿ ವಿಶ್ವಾಸ ಬರುತ್ತದೆ.   ಪ್ರಪಂಚ ನಡೆಯುತ್ತಿರುವುದೇ ನಂಬಿಕೆಯ ಮೇಲೆ. ನಂಬಿಕೆಗೆ ಚ್ಯುತಿ ಬರದಂತೆ ಕೆಲಸ ಮಾಡೋಣ ಎಂದರು.

ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಕೆ. ಸದಾಶಿವ ಶೆಣೈ ಅವರು ಮಾತನಾಡಿ, ಪತ್ರಕರ್ತರಿಗೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಜಾರಿಗೆ ತರಲು ಹಾಗೂ ಪತ್ರಕರ್ತರಿಗೆ ಬಸ್ ಪಾಸ್ ಕೊಡಿಸಲು ಸಚಿವರು ಹೆಚ್ಚು ಪ್ರೇರಣೆಯಾಗಿದ್ದಾರೆ. ಮುಖ್ಯಮಂತ್ರಿಗಳು ಸಹ ಸಹಾಯ ಹಸ್ತ ಚಾಚಿ ಬೆಂಬಲ ನೀಡಿದ್ದಾರೆ ಎಂದರು.

ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ಮಂಜುನಾಥ್ ಪ್ರಸಾದ್, ಭಾ.ಆ.ಸೇ., ಖ್ಯಾತ ಚಲನಚಿತ್ರ ಕಲಾವಿದೆ ಶ್ರೀಮತಿ ಪ್ರೇಮ ಹಾಗೂ ಅಕಾಡೆಮಿಯ ಸದಸ್ಯರುಗಳು ಹಾಗೂ ಕಾರ್ಯದರ್ಶಿಗಳಾದ ಸಿ. ರೂಪಾ ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

10 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

21 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

21 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

23 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

23 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

24 hours ago