ಬಿಸಿ ಬಿಸಿ ಸುದ್ದಿ

ಜನಪರ ಬಜೆಟ್ ಮಂಡನೆ: ಕಲಬುರಗಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಕಲಬುರಗಿ: ನಾಡಿನ ಜನರ ಅಶೋತ್ತರಗಳಿಗೆ ಸ್ಪಂದಿಸುವ ಜನಪರ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಅಫಜಲಪೂರ ತಾಲೂಕಿನ ಗಾಣಗಾಪೂರಕ್ಕೆ ಆಗಮಿಸಿದ ಅವರು, ಶ್ರೀ ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದು, ಆಯವ್ಯಯ ಏನಿರಲಿದೆ ಎಂಬುದನ್ನು ಕಾದು ನೋಡಿ ಎಂದರು.

ಕರುನಾಡಿನ ಸಮೃದ್ಧಿ, ಸುಭಿಕ್ಷೆಗೆ ಶ್ರೀ ಗುರು ದತ್ತಾತ್ರೇಯರ ಬಳಿ ಪ್ರಾರ್ಥನೆ ಸಲ್ಲಿಸಿರುವೆ. ದತ್ತಾತ್ರೇಯನ ಆಶೀರ್ವಾದ ,ಅನುಗ್ರಹ ನಮ್ಮೆಲ್ಲರ ಮೇಲಿರಲಿದೆ ಎಂದರು.

ದತ್ತನ ಕ್ಷೇತ್ರದ ಅಭಿವೃದ್ದಿಗೆ 67 ಕೋಟಿ ರೂ. ಮಾಸ್ಟರ್ ಪ್ಲ್ಯಾನ್ ಸಿದ್ಧ: ಕಾಶಿ ವಿಶ್ಚನಾಥ ಮತ್ತು ಉಜ್ಜೈನಿಯ ಕಾಳ ಹಸ್ತಿ ಮಾದರಿಯಲ್ಲಿ ಗಾಣಗಾಪೂರ ಸಮಗ್ರ ಅಭಿವೃದ್ಧಿಪಡಿಸಲಾಗುವುದು. 2022-23ನೇ ಸಾಲಿಗೆ 5 ಕೋಟಿ ರೂ. ನೀಡಲಾಗಿದೆ. ಜಿಲ್ಲಾಡಳಿತ ದತ್ತನ ಕ್ಷೇತ್ರದ ಅಭಿವೃದ್ಧಿಗೆ 67 ಕೋಟಿ ರೂ. ವೆಚ್ಚದ ಡಿ.ಪಿ.ಆರ್. ಸಿದ್ದಪಡಿಸಿದ್ದು, ಬರುವ ಆಯವ್ಯಯದಲ್ಲಿ ಇದನ್ನು ಘೋಷಿಸಿ ಅನುμÁ್ಠನಕ್ಕೆ ತರಲಾಗುವುದು ಎಂದರು.

ನಾಲ್ಕೈದು ರಾಜ್ಯಗಳ ಯಾತ್ರಿಕರು ಇಲ್ಲಿ ಬರುವುದರಿಂದ ಇದನ್ನು ಯಾತ್ರಿ ಕೇಂದ್ರವನ್ನಾಗಿಸಿ ಅಭಿವೃದ್ಧಿ ಪಡಿಸಲಾಗುವುದು. ವಿಶೇಷವಾಗಿ ದೇವಸ್ಥಾನ ಹಾಗೂ ಭೀಮಾ ನದಿ ತೀರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಪ್ರಶ್ನೆಗೆ ಉತ್ತರಿಸಿದರು.

ಗಾಣಗಾಪೂರದ ದತ್ತನ ಸನ್ನಿಧಿಯಲ್ಲಿ ಸಿ.ಎಂ. ಅವರಿಗೆ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಬಸವರಾಜ ಮತ್ತಿಮೂಡ, ಶಶೀಲ ನಮೋಶಿ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಸಾಥ್ ನೀಡಿದರು.

ನಂತರ ಮುಖ್ಯಮಂತ್ರಿಗಳು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ವಿಠ್ಠಲ್ ಹೇರೂರ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

emedialine

Recent Posts

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

1 min ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

12 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago